No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಮಂತ್ರಾಲಯದಲ್ಲಿ 50 ಕೊಠಡಿಗಳ ನೂತನ ಕರ್ನಾಟಕ ಛತ್ರ ಲೋಕಾರ್ಪಣೆ

ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ

kalpa News by kalpa News
August 10, 2022
in ರಾಯಚೂರು
0
ಮಂತ್ರಾಲಯದಲ್ಲಿ 50 ಕೊಠಡಿಗಳ ನೂತನ ಕರ್ನಾಟಕ ಛತ್ರ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂತ್ರಾಲಯ  |

ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.

ಮಂತ್ರಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಛತ್ರದ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬಿಜೆಪಿ ಸರಕಾರ ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಮಹತ್ವ ನೀಡುತ್ತಿದೆ. ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನ ನಮ್ಮ ಇಲಾಖೆಗೆ ನೀಡಲಾಗಿದೆ. ರಾಜ್ಯದಿಂದ ಹೊರರಾಜ್ಯಕ್ಕೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೊರರಾಜ್ಯಗಳಲ್ಲೂ ಕರ್ನಾಟಕ ಛತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗಿದೆ. ಕೆಲವು ದಿನಗಳ ಹಿಂದೆ ಕೇರಳ ರಾಜ್ಯದ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕಾಗಿ 5 ಕೋಟಿ, ಮಹಾರಾಷ್ಟ್ರದ ಪಂಡರಾಪುರದಲ್ಲಿ ಛತ್ರಕ್ಕಾಗಿ 3 ಕೋಟಿ ಮಂತ್ರಾಲಯದಲ್ಲಿ ಛತ್ರಗಳ ಅಭಿವೃದ್ದಿಗಾಗಿ 4 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ಹಿಂದೆ ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳ ಬೃಹತ್‌ ಅನುದಾನ ನೀಡಲಾಗಿದ್ದು ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದರು.

ಇಂದು ಮಂತ್ರಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 50 ಕೊಠಡಿಗಳ ಛತ್ರವನ್ನು ಲೋಕಾರ್ಪಣೆಗೊಳಿಸಲಾಗಿದೆ. ಹಳೆಯ ಕಟ್ಟಡವನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ 4 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಮಂತ್ರಾಲಯದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ರಾಜ್ಯ ಸರಕಾರದ ವತಿಯಿಂದ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು.

ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ
ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲಕ ಮಾಡಿಕೊಡುವ ನಿಟ್ಟಿನಲ್ಲಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಕೋರಿ ಉತ್ತರಪ್ರದೇಶದ ಅಧಿಕಾರಿಗಳೊಂದಿಗೆ ಪತ್ರವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು. ಒಟ್ಟಾರೆಯಾಗಿ ಹೊರ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೂ ನಮ್ಮ ರಾಜ್ಯದ ಜನರಿಗೆ ಅನುಕೂಲ ಮಾಡಿಕೊಡಲು ಎಲ್ಲಾ ರೀತಿಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
50 ಕೊಠಡಿಗಳ ನೂತನ ಕಟ್ಟಡ
4 ಕೋಟಿ ರೂಪಾಯಿಗಳ ಅನುದಾನದಲ್ಲಿ 0.5 ಗುಂಟೆಯಲ್ಲಿ 50 ಕೊಠಡಿಗಳ ಕರ್ನಾಟಕ ಛತ್ರ ನಿರ್ಮಾಣವಾಗಿದೆ. 40 ಡಿಲಕ್ಸ್‌ ಹಾಗೂ 10 ವಿಐಪಿ ರೂಂಗಳಿದ್ದು, ಮುಜರಾಯಿ ಇಲಾಖೆಯ ವತಿಯಿಂದ ನೀಡಲಾಗಿರುವ 54 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಪಿಠೋಪಕರಣಗಳನ್ನು ಒದಗಿಸಲಾಗಿದೆ. ಛತ್ರಗಳ ಅಭಿವೃದ್ದಿಗೆ ಜುಲೈ 23, 2022 ರಂದು 4 ಕೋಟಿ ರೂಪಾಯಿಗಳ ಹೆಚ್ಚುವರಿ ಅನುದಾನ ಒದಗಿಸಲಾಗಿದ್ದು, ಸದ್ಯದಲ್ಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮಂತ್ರಾಲಯ ಅಭಿವೃದ್ದಿಗೆ ಕರ್ನಾಟಕ ರಾಜ್ಯದಿಂದ ಬಹಳಷ್ಟು ಸಹಕಾರ
ಕರ್ನಾಟಕ ರಾಜ್ಯದಿಂದಲೇ ಅತಿ ಹೆಚ್ಚು ಯಾತ್ರಾರ್ಥಿಗಳು ಆಗಮಿಸುವ ಮಂತ್ರಾಲಯಕ್ಕೆ ಕರ್ನಾಟಕ ಸರಕಾರ ಬಹಳಷ್ಟು ಸಹಕಾರ ನೀಡಿದೆ. 30 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಕರ್ನಾಟಕ ಛತ್ರ ಶಿಥಿಲವಾಗಿತ್ತು. ಇದನ್ನು ಮನಗೊಂಡ ಕರ್ನಾಟಕ ಸರಕಾರ 4 ಕೋಟಿ ರೂಪಾಯಿಗಳ ವೆಚ್ಚದಲ್ಲಿ 50 ಕೊಠಡಿಗಳ ನೂತನ ಛತ್ರವನ್ನು ನಿರ್ಮಿಸಿದೆ. ಈ ಬಾರಿಯ ರಾಯರ ಆರಾಧನೆಯ ಸಂಧರ್ಭದಲ್ಲಿ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದ್ದು, ನೂತನ ಕಟ್ಟಡದಿಂದ ಬಹಳಷ್ಟು ಅನುಕೂಲವಾಗಲಿದೆ ಎಂದು ಮಂತ್ರಾಲಯದ ಶ್ರೀಶ್ರೀ 108 ಶ್ರೀ ಸುಬುದೇಂಧ್ರ ತೀರ್ಥ ಪಾದಂಗಳವರು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಮಂತ್ರಾಲಯ ಕರ್ನಾಟಕ ಛತ್ರದ ವ್ಯವಸ್ಥಾಪಕರಾದ ತ್ರಿವೇಣಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaKannada News WebsiteLatest News KannadaMantralayamಅಯೋಧ್ಯೆಉತ್ತರಪ್ರದೇಶಕರ್ನಾಟಕ ಛತ್ರಕರ್ನಾಟಕ ಭವನತಿರುಮಲಧಾರ್ಮಿಕ ಕೇಂದ್ರಮಂತ್ರಾಲಯಮಹಾರಾಷ್ಟ್ರಶ್ರೀ ಸುಬುದೇಂಧ್ರ ತೀರ್ಥ ಪಾದಂಗಳವರು
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಲಜೀವನ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

Next Post

ಗದಗ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಪಂ ಸಿಇಒ ವೈಶಾಲಿ ಪದೋನ್ನತಿಯೊಂದಿಗೆ ವರ್ಗಾವಣೆ

kalpa News

kalpa News

Next Post
ಗದಗ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಪಂ ಸಿಇಒ ವೈಶಾಲಿ ಪದೋನ್ನತಿಯೊಂದಿಗೆ ವರ್ಗಾವಣೆ

ಗದಗ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಪಂ ಸಿಇಒ ವೈಶಾಲಿ ಪದೋನ್ನತಿಯೊಂದಿಗೆ ವರ್ಗಾವಣೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL