ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು.
ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು.


ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ. ಮದನಗೌಡ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ದ.ಕ.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
(ವರದಿ: ಡಿ.ಎಲ್. ಹರೀಶ್)
Get in Touch With Us info@kalpa.news Whatsapp: 9481252093





Discussion about this post