ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆಗೆ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ನೀರು ಹರಿದು ಬರುತ್ತಿದೆ.
ಸೋಮವಾರ 6,372 ಕ್ಯೂಸೆಕ್ಸ್ ಒಳಹರಿವು ದಾಖಲಾಗಿದೆ. ಭಾನುವಾರ 3,522 ಕ್ಯೂಸೆಕ್ಸ್ ಒಳಹರಿವು ಇತ್ತು. ಶಿವಮೊಗ್ಗದ ತುಂಗಾ ಜಲಾಶಯ ಭರ್ತಿಯಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಒಳಹರಿವು ಹೆಚ್ಚಾಗಿದೆ.
ಶಿವಮೊಗ್ಗ ಸುತ್ತಮುತ್ತ ಹಾಗೂ ನದಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು. ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಜಲಾಶಯ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ವರದಿ: ಎಂ.ಎಂ. ನಾಡಿಗೇರ್
Get In Touch With Us info@kalpa.news Whatsapp: 9481252093
Discussion about this post