ಕಲ್ಪ ಮೀಡಿಯಾ ಹೌಸ್
ಕಾರ್ಗಲ್: ಶರಾವತಿ ಹಿನ್ನೀರಿನಲ್ಲಿ ಸತತ ಮಳೆಯಿಂದಾಗಿ ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಕೆಳದಂಡೆ ಹಾಗೂ ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಈ ಕುರಿತಂತೆ ಮುನ್ನೆಚ್ಚರಿಕೆ ಸೂಚನೆ ನೀಡಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಅಧಿಕಾರಿಗಳು, ಆ.12ರ ಇಂದು ಮುಂಜಾನೆ 8 ಗಂಟೆಗೆ ನೀರು 1812 ಅಡಿಗಳನ್ನು ತಲುಪಿದ್ದು, ಈ ಮೂಲಕ ಶೇ.85ರಷ್ಟು ಭರ್ತಿಯಾಗಿದೆ. ಒಳಹರಿವು 11,175 ಕ್ಯೂಸೆಕ್ಸ್ ಇದ್ದು ಇದೇ ರೀತಿಯಲ್ಲಿ ನೀರಿನ ಹರಿವು ಇದ್ದರೆ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆಯಿದೆ. ಹೀಗಾಗಿ ಅಣೆಕಟ್ಟೆಯ ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುತ್ತದೆ.
ಹೀಗಾಗಿ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post