ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ ಕಂಡುಬಂದಿದ್ದು, ಅವರು ಗುಣಮುಖರಾಗುತ್ತಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಸ್’ಪಿಬಿ ಪುತ್ರ ಚರಣ್, ತಂದೆಯವರಿಗೆ ಕೊರೋನಾ ನೆಗೆಟಿವ್ ಬಂದಿದೆ. ಈಗ ಶ್ವಾಸಕೋಶದ ಸೋಂಕು ಸಹ ಕಡಿಮೆಯಾಗಿದ್ದು, ಅವರು ಗುಣಮುಖರಾಗುತ್ತಿದ್ದಾರೆ ಎಂದಿದ್ದಾರೆ.
ವೆಂಟಿಲೇಟರ್’ನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದ್ದು, ಶೀಘ್ರ ಸಂಪೂರ್ಣ ಗುಣಮುಖರಾಗುವ ವಿಶ್ವಾಸವಿದೆ ಎಂದಿದ್ದಾರೆ.
ಎಸ್’ಪಿಬಿ ಆರೋಗ್ಯಕ್ಕಾಗಿ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳು ಪ್ರಾರ್ಥನೆ, ಪೂಜೆ ಸಲ್ಲಿಸಿದ್ದರು. ಈಗ ಇವರು ಗುಣಮುಖರಾಗುತ್ತಿರುವುದು ಅಭಿಮಾನಿಗಳಲ್ಲಿ ಸಮಾಧಾನ ಮೂಡಿಸಿದೆ.
Get In Touch With Us info@kalpa.news Whatsapp: 9481252093

















