ನವದೆಹಲಿ: ಭಾರತದ ವಾಯು ನಿಯಂತ್ರಣಾ ಪ್ರದೇಶವನ್ನು ಅತಿಕ್ರಮಿಸಿದ ಪಾಕಿಸ್ಥಾನದ ವಿಮಾನವನ್ನು ಭಾರತೀಯ ಪಡೆಗಳು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ.
ಭಾರತದ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಭಾರತದೊಳಗೆ ನುಗ್ಗಿದ್ದ ಪಾಕಿಸ್ತಾನದ ಎಫ್-16 ವಿಮಾನವನ್ನು ಹೊಡೆದುರುಳಿಸಿದ್ದು ಪ್ಯಾರಶೂಟ್ ಬಳಸಿ ಕೆಳಗೆ ಹಾರಿರುವುದಾಗಿ ವರದಿಯಾಗಿದೆ.
ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದ್ದು ಜಮ್ಮು ಕಾಶ್ಮೀರದಲ್ಲಿ ಎಲ್ಲಾ ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದೆ ಎಂದು ವರದಿ ಹೇಳಿದೆ.
ಭಾರತದ ಒಳಗೆ ಪ್ರವೇಶಿಸಿದ್ದ ಪಾಕಿಸ್ತಾನದ ಎಫ್-16 ಯುದ್ದ ವಿಮಾನವನ್ನು ಭಾರತದ ವಾಯು ಸೇನೆ ಹೊಡೆದಾಕ್ಷಣ, ಗಲಿಬಿಲಿಗೊಂಡ ಪಾಕ್ ಪೈಲಟ್ ಪ್ಯಾರಾಚ್ಯೂಟ್ ಬಳಿಸಿ ಹೊರಗಡೆ ಜಿಗಿದಿದ್ದ. ಆತನ ಹುಡುಕಾಟಕ್ಕೆ ಭಾರತೀಯ ಭದ್ರತಾಪಡೆ ಶೋಧ ಕಾರ್ಯನಡೆಸುತ್ತಿದೆ ಎಂದು ವರದಿಯಾಗಿದೆ.
ಪಾಕಿಸ್ಥಾನದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದ್ದು, ಜಮ್ಮು ಕಾಶ್ಮೀರದಲ್ಲಿ ಎಲ್ಲಾ ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದೆ ಎಂದು ವರದಿ ಹೇಳಿದೆ. ಎಲ್ ಒಸಿ ಬಳಿಯ ವಾಯುಗಡಿಯನ್ನು ಉಲ್ಲಂಘಿಸಿ ಪಾಕಿಸ್ಥಾನದ ಮೂರು ಜೆಟ್ ವಿಮಾನಗಳು ದಾಳಿ ನಡೆಸಲು ವಿಫಲ ಪ್ರಯತ್ನ ನಡೆಸಿರುವುದಾಗಿ ಪಿಟಿಐ ವರದಿ ಮಾಡಿದೆ. ಏತನ್ಮಧ್ಯೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಅಲ್ಲದೇ, ಗಡಿಯಲ್ಲಿ ಯುದ್ಧ ವಾತಾವರಣ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಠಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ವಿಮಾನ ನಿಲ್ದಾಣ ಸ್ಧಗಿತಗೊಳಿಸಲಾಗಿದ್ದು ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದ್ದು ಎಲ್ಲಾ ವಿಮಾನಗಳು ದೆಹಲಿಗೆ ವಾಪಸ್ ಆಗಿವೆ ಎಂದು ವರದಿ ಮಾಡಿದೆ.
Discussion about this post