ಶ್ರೀನಗರ: ಬಂಡಿಪೋರಾದಲ್ಲಿ ಉಗ್ರರ ನಡೆವೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುವ ವೇಳೆ ಓರ್ವ ಯೋಧ ವೀರಸ್ವರ್ಗ ಸೇರಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಸೇನೆ ಮರು ಕಾರ್ಯಾಚರಣೆ ನಡೆಸಿ, ಇಬ್ಬರು ಉಗ್ರರನ್ನು ಬೇಟೆಯಾಡಿ ಸೇಡುತೀರಿಸಿಕೊಂಡಿದೆ.
ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಪನಾರ್ ಅರಣ್ಯ ಪ್ರದೇಶದಲ್ಲಿ ಉಗ್ರರ ಚಟುವಟಿಕೆಗಳ ಕುರಿತು ಮಾಹಿತಿ ಪಡೆದ ಸೈನಿಕರು ಕೂಡಲೇ ಅರಣ್ಯವನ್ನು ಸುತ್ತುವರೆದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದರು. ಸೈನಿಕರು ಸುತ್ತುವರೆದ ವಿಚಾರ ತಿಳಿಯುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ ಓರ್ವ ಯೋಧನಿಗೆ ಗುಂಡೇಟು ತಗುಲಿ ವೀರಸ್ವರ್ಗ ಸೇರಿದ್ದಾನೆ.
ಬಳಿಕ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ದಾಳಿ ತೀವ್ರಗೊಂಡಿದ್ದು, ಯೋಧರಿಂದ ನಡೆದ ತೀವ್ರ ಪ್ರತಿದಾಳಿ ವೇಳೆ ಇಬ್ಬರು ಉಗ್ರರು ಸತ್ತಿದ್ದಾರೆ. ಘಟನಾ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಶಂಕೆ ಇದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ.






Discussion about this post