ಕಲ್ಪ ಮೀಡಿಯಾ ಹೌಸ್ | ಮೈಸೂರು |
ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಸುಗಮ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆ ಮೈಸೂರು–ಕಣ್ಣೂರು–ಬೆಂಗಳೂರು ದಂಡು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಘೋಷಿಸಿದೆ. ತಲಾ ಎರಡು ಟ್ರಿಪ್‌ಗಳನ್ನು ಎರಡೂ ದಿಕ್ಕಿನಲ್ಲಿ ಸಂಚರಿಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು (Indian Railways) ತಿಳಿಸಿದ್ದಾರೆ.
ರೈಲು ಸಂಖ್ಯೆ 06227 ಮೈಸೂರು–ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ಆಗಸ್ಟ್ 25, 2026 (ಮಂಗಳವಾರ) ರಂದು ರಾತ್ರಿ 10:30ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2:00ಕ್ಕೆ ಕಣ್ಣೂರು ತಲುಪಲಿದೆ.
Also Read>> Rare ‘Artery of Percheron’ Stroke | 65ರ ವೃದ್ಧನಿಗೆ NH ಆಸ್ಪತ್ರೆ ವೈದ್ಯರ ಯಶಸ್ವಿ ಚಿಕಿತ್ಸೆ
ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06228 ಕಣ್ಣೂರು–ಬೆಂಗಳೂರು ದಂಡು ವಿಶೇಷ ಎಕ್ಸ್‌ಪ್ರೆಸ್ ಆಗಸ್ಟ್ 26, 2026 (ಬುಧವಾರ) ರಂದು ಸಂಜೆ 6:25ಕ್ಕೆ ಕಣ್ಣೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8:35ಕ್ಕೆ ಬೆಂಗಳೂರು ದಂಡು ತಲುಪಲಿದೆ.
ಅದೇ ರೀತಿ, ರೈಲು ಸಂಖ್ಯೆ 06229 ಮೈಸೂರು–ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ಆಗಸ್ಟ್ 29, 2026 (ಶನಿವಾರ) ರಂದು ರಾತ್ರಿ 11:55ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಸಂಜೆ 5:50ಕ್ಕೆ ಕಣ್ಣೂರು ತಲುಪಲಿದೆ.
ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06230 ಕಣ್ಣೂರು–ಬೆಂಗಳೂರು ದಂಡು ವಿಶೇಷ ಎಕ್ಸ್‌ಪ್ರೆಸ್ ಆಗಸ್ಟ್ 30, 2026 (ಭಾನುವಾರ) ರಂದು ಸಂಜೆ 7:45ಕ್ಕೆ ಕಣ್ಣೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 10:00ಕ್ಕೆ ಬೆಂಗಳೂರು ದಂಡು ತಲುಪಲಿದೆ.
Indian Railways : ವಿಶೇಷ ಎಕ್ಸ್‌ಪ್ರೆಸ್ ನಿಲ್ದಾಣಗಳು
ಈ ವಿಶೇಷ ರೈಲುಗಳು ಮಾರ್ಗ ಮಧ್ಯದಲ್ಲಿ ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ ಜಂಕ್ಷನ್, ಸೇಲಂ ಜಂಕ್ಷನ್, ಈರೋಡ್ ಜಂಕ್ಷನ್, ತಿರುಪ್ಪೂರು, ಪೊದನೂರು ಜಂಕ್ಷನ್, ಪಾಲಕ್ಕಾಡ್ ಜಂಕ್ಷನ್, ಶೋರನೂರು ಜಂಕ್ಷನ್, ತಿರೂರು, ಕೋഴിക്കೋಡ್, ವಡಕರ ಮತ್ತು ತಲಶ್ಶೇರಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ.
ವಿಶೇಷ ಎಕ್ಸ್‌ಪ್ರೆಸ್ ಬೋಗಿಗಳ ವಿನ್ಯಾಸ
ಪ್ರತಿ ರೈಲಿನಲ್ಲಿ ಒಟ್ಟು 20 ಬೋಗಿಗಳು ಇರಲಿದ್ದು, ಅವುಗಳಲ್ಲಿ 1 ಎಸಿ ಟು ಟಯರ್, 2 ಎಸಿ ತ್ರಿ ಟಯರ್, 9 ಸ್ಲೀಪರ್ ಕ್ಲಾಸ್, 6 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳನ್ನು ಒಳಗೊಂಡಿರಲಿವೆ.
ಓಣಂ ಹಬ್ಬದ ವೇಳೆಯಲ್ಲಿ ಪ್ರಯಾಣಿಕರು ಈ ವಿಶೇಷ ರೈಲುಗಳ ಸೌಲಭ್ಯವನ್ನು ಬಳಸಿಕೊಂಡು ತಮ್ಮ ಪ್ರಯಾಣವನ್ನು ಸುಗಮಗೊಳಿಸಿಕೊಳ್ಳುವಂತೆ ನೈಋತ್ಯ ರೈಲ್ವೆ ಮನವಿ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









