ಕಲ್ಪ ಮೀಡಿಯಾ ಹೌಸ್ | ಇಂದೋರ್ |
ಲೋಕಸಭಾ ಚುನಾವಣೆ ಹೊತ್ತಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಇಂದೋರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಕ್ಷಯ್ ಕಾಂತಿ ಭಾಮ್ ಅವರು ನಾಮಪತ್ರ ಹಿಂಪಡೆದಿದ್ದು, ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತಂತೆ ವರದಿಯಾಗಿದ್ದು, ಇಂದು ಮುಂಜಾನೆ ಅಕ್ಷಯ್ ಕಾಂತಿ ಅವರು ಬಾಮ್ ರಮೇಶ್ ಮೆಂಡೋಲಾ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆದಿದ್ದಾರೆ.
ಅಷ್ಟೇ ಅಲ್ಲದೇ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎನ್ನಲಾಗುತ್ತಿದೆ. ನಾಮಪತ್ರ ಹಿಂಪಡೆದ ಅಕ್ಷಯ್ ಕಾಂತಿ ಅವರ ಫೋನ್ ಕೂಡಾ ಸ್ವಿಚ್ ಆಫ್ ಆಗಿದೆ ಎಂದು ಹೇಳಲಾಗಿದೆ.
Also read: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | ಎಷ್ಟು ವರ್ಷ? ಇಲ್ಲಿದೆ ಮಾಹಿತಿ
ಮೇ 13 ರಂದು ಮತದಾನ ನಡೆಯಲಿರುವ ಇಂದೋರ್ ಲೋಕಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಸಂಸದ ಶಂಕರ್ ಲಾಲ್ವಾನಿ ವಿರುದ್ಧ ಬಾಮ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಬಾಮ್ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post