ಕಲ್ಪ ಮೀಡಿಯಾ ಹೌಸ್ | ಇಂದೋರ್ |
ಇಲ್ಲಿನ ದೇವಾಲಯದ ಮೆಟ್ಟಿಲು ಬಾವಿ ಕುಸಿದು ಸಾವನ್ನಪ್ಪಿರುವವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಸ್ಥಳೀಯ ಜಿಲ್ಲಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಪಟೇಲ್ ನಗರದಲ್ಲಿರುವ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ಸಾವಿರಾರು ಮಂದಿ ನೆರೆದಿದ್ದರು. ಬಾವಿಯ ಮೇಲೆ ಹಾಸಲಾಗಿದ್ದ ಸಿಮೆಂಟ್ ಹಾಸು ಭಾರ ತಾಳಲಾರದೇ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಒಟ್ಟು ಸಾವಿಗೀಡಾಗಿರುವವರ ಸಂಖ್ಯೆ 35ಕ್ಕೆ ಏರಿಕೆಯಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. 14 ಮಂದಿಯನ್ನು ರಕ್ಷಿಸಲಾಗಿದೆ.
ಘಟನೆಯಲ್ಲಿ ಮೃತರಾದವರ ಕುಟುಂಬಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.
Also read: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post