ಮೈಸೂರು: ಕೊಡಗಿನಲ್ಲಿ ಸಂಭವಿಸಿದ ಪ್ರವಾಹದಿಂದ ಸೂರು ಕಳೆದುಕೊಂಡಿರುವ ಸಂತ್ರಸ್ತರ ವಸತಿ ನಿರ್ಮಾಣಕ್ಕಾಗಿ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಘೋಷಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಈ ಬಾರಿ ದಸರಾಗೆ ಅಧಿಕೃತ ಚಾಲನೆ ನೀಡಿದ ಮಾತನಾಡಿದ ಅವರು, ಸರ್ಕಾರ ಮಾಡುವ ಯಾವುದೇ ಕೆಲಸದಲ್ಲಿ ನಾವು ಕೈಜೋಡಿಸುವುದು ನಮ್ಮ ಕರ್ತವ್ಯ. ನಮಗೆ ಸಮಾಜದಿಂದ ಸಿಕ್ಕಿದ ಹಣ ಮತ್ತೆ ಸಮಾಜಕ್ಕೆ ಮತ್ತೆ ಮರಳಿ ಹೋಗಬೇಕು. ಹೀಗಾಗಿ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿಗೆ ಸರ್ಕಾರ ಸ್ಥಳ ಗುರುತಿಸಿದರೆ ಇನ್ಫೋಸಿಸ್ ವತಿಯಿಂದ 25 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ನಿರ್ಮಿಸಿಕೊಡಲಾಗುವುದು ಎಂದು ಘೋಷಿಸಿದರು.
ಇನ್ನು ದಸರಾ ಕುರಿತಂತೆ ಮಾತನಾಡಿದ ಅವರು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ದಸರಾ ಆಚರಣೆಯನ್ನು ಈ ಬಾರಿ ಉದ್ಘಾಟಿಸಲು ನನಗೆ ಅವಕಾಶ ದೊರೆತಿದ್ದು ನನ್ನ ಪೂರ್ವಜನ್ಮದ ಪುಣ್ಯ ಎಂದು ಭಾವಿಸುತ್ತೇನೆ ಎಂದರು.
ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಸುಧಾಮೂರ್ತಿ ವಿಶ್ವ ವಿಖ್ಯಾತ ದಸರಾ ಹಬ್ಬಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭವನ್ನು ನಾವೆಲ್ಲರೂ ಸಂಭ್ರಮಿಸೋಣ.
ಇದೇ ಸಂದರ್ಭದಲ್ಲಿ ಕೊಡಗಿನಲ್ಲಿ ನಿರಾಶ್ರಿತರಾದವರಿಗೆ ಮನೆ ಕಟ್ಟಿಕೊಡಲು 25 ಕೋಟಿ ರೂಪಾಯಿಗಳನ್ನು ಕೊಡುವುದಾಗಿ ಸುಧಾಮೂರ್ತಿ ತಿಳಿಸಿದ್ದಾರೆ, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ pic.twitter.com/xG58vVmBif
— CM of Karnataka (@CMofKarnataka) October 10, 2018
ಕೊಡಗು ಸಂತ್ರಸ್ತರ ವಸತಿಗಾಗಿ 25 ಕೋಟಿ ರೂ. ನೆರವು ಘೋಷಿಸಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೊಡಗಿನಲ್ಲಿ ನಿರಾಶ್ರಿತರಾಗಿರುವವರಿಗೆ 25 ಕೋಟಿ ರೂ. ಸಹಾಯ ಘೋಷಿಸಿರುವ ಸುಧಾಮೂರ್ತಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.
I am grateful to Infosys Foundation Chairperson Ms Sudha Murty for announcing Rs 25 Cr for victims of Kodagu floods. A noble gesture indeed. #MysuruDasara2018 #MysuruDasara #Nadahabba pic.twitter.com/iD51re14oL
— CM of Karnataka (@CMofKarnataka) October 10, 2018
Discussion about this post