ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರು ಮುಂದಾಗಿದ್ದಾರೆ.
ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ಇನ್ಫೋಸಿಸ್ ಫೌಂಡೇಶನ್ ವಿತರಿಸಲಿದ್ದು, ಈ ಕಾರ್ಯಕ್ಕೆ ನಗರದ ಬನಶಂಕರಿ ಪೋಸ್ಟ್ ಆಫೀಸ್ ಬಳಿಯಲ್ಲಿ ಚಾಲನೆ ನೀಡಲಾಯಿತು.
ನಿರ್ಮಾಪಕ ರಮೇಶ್ ರೆಡ್ಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಅಧ್ಯಕ್ಷರಾದ ಸಾ ರಾ ಗೋವಿಂದು, ಕಾರ್ಮಿಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಸೇರಿದಂತೆ ಹಲವರು ಈ ಕಾರ್ಯಕ್ಕೆ ಚಾಲನೆ ನೀಡಿದರು. ಇನ್ಪೋಸಿಸ್ ಫೌಂಡೇಷನ್ ವತಿಯಿಂದ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ವಿತರಣೆಯ ಕಾರ್ಯವನ್ನು ಮುಂದುವರೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗಾಳೀಪಟ – 2 ಸಿನೆಮಾದ ನಿರ್ಮಾಪಕರಾದ ರಮೇಶ್ ರೆಡ್ಡಿ, ಇನ್ಪೋಸಿಸ್ ಫೌಂಡೇಷನ್ ನ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರಿಂದ ದೇಶ ಹಾಗೂ ರಾಜ್ಯದಲ್ಲಿ ಅನೇಕ ಒಳ್ಳೆಯ ಕೆಲಸಗಳು ಆಗುತ್ತಿವೆ. ಈ ತೊಂದರೆಯ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿಯನ್ನು ತೋರಿಸಿರುವುದು ಸ್ವಾಗತಾರ್ಹ ವಿಷಯವಾಗಿದೆ ಎಂದರು.
ಸಾರಾ ಗೋವಿಂದು ಮಾತನಾಡಿ, 18 ಚಲನಚಿತ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಕರೋನಾ ಕರ್ಪ್ಯೂದಿಂದಾಗಿ ಎಲ್ಲರ ಜೀವನ ತೊಂದರೆಗೆ ಸಿಲುಕಿದೆ. ಅವರ ಜೀವನಕ್ಕೆ ಅಗತ್ಯವಿರುವ ವಸ್ತುಗಳನ್ನು ನೀಡಲು ಇನ್ಪೋಸಿಸ್ ಫೌಂಡೇಷನ್ ನ ಮುಖ್ಯಸ್ಥೆ ಶ್ರೀಮತಿ ಸುಧಾ ಮೂರ್ತಿ ಮುಂದಾಗಿರುವುದು ಬಹಳ ಸಂತಸದ ವಿಷಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಮಿಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್, ಇನ್ಪೋಸಿಸ್ ಫೌಂಡೇಶನ್ ನ ಪ್ರಶಾಂತ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಮಾಹಿತಿ: ತೀರ್ಥಹಳ್ಳಿ ಅನಂತ ಕಲ್ಲಾಪುರ
Get in Touch With Us info@kalpa.news Whatsapp: 9481252093
Discussion about this post