ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ನಗರದ ಪ್ರಮುಖ 14 ಟ್ರಾಫಿಕ್ ಸಿಗ್ನಲ್ ವೃತ್ತಗಳು ಹಾಗೂ ಹಂಪ್ಸ್ ಗಳ ಮೇಲೆ #ReflectorCatEyes ರಿಫ್ಲೆಕ್ಟರ್ ಕ್ಯಾಟ್ ಐಸ್‌ಗಳನ್ನು ಮತ್ತು ಸೋಲಾರ್ ರೋಡ್ ಸ್ಟಡ್‌ಗಳನ್ನು #SolarRoadStud ಅಳವಡಿಸಿದೆ.
Also Read: ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?
ಇವು ಕತ್ತಲಲ್ಲಿ ಪ್ರಕಾಶಮಾನವಾಗಿ ಹೊಳೆಯುವುದರಿಂದ ದೂರದಿಂದಲೇ ಸವಾರರಿಗೆ ರಸ್ತೆಯ ತಿರುವು ಹಾಗೂ ಹಂಪ್‌ಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.
ಈ ಸೋಲಾರ್ ಸ್ಟಡ್‌ಗಳ ಅಳವಡಿಕೆಗೆ ಸಾರ್ವಜನಿಕರ ಹಾಗೂ ವಾಹನ ಸವಾರರ ಮೆಚ್ಚುಗೆಗೆ ಪಾತ್ರವಾಗಿದೆ.
ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ, ಎಲ್ಲಾ ವಾಹನ ಸವಾರರು ತಮ್ಮ ಸುರಕ್ಷತೆಗಾಗಿ ಅಗತ್ಯ ಸಂಚಾರ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
ಸುರಕ್ಷಿತವಾಗಿ ಚಲಿಸಿ-ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















