ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಮಧ್ಯಂತರ ಬಜೆಟ್ ಫೆ.1ರಂದು ಮಂಡನೆಯಾಗಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
ಈ ಕುರಿತಂತೆ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ(ಸಿಸಿಪಿಎ) ಮಹತ್ವದ ನಿರ್ಣಯ ಕೈಗೊಂಡಿದ್ದು, ಫೆ.1ರಂದು ಮಧ್ಯಂತರ ಬಜೆಟ್ ಮಂಡನೆಯಾಗಲಿದೆ.
ಸಂಸತ್ ಬಜೆಟ್ ಅಧಿವೇಶನ ಜನವರಿ 1 ರಿಂದ ಆರಂಭವಾಗಿ ಫೆ.13ಕ್ಕೆ ಮುಕ್ತಾಯವಾಗಲಿದೆ.
ಮೇ ತಿಂಗಳಿನಲ್ಲಿ ಮೋದಿ ಸರ್ಕಾರದ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡುವುದಕ್ಕೆ ಅವಕಾಶವಿಲ್ಲದ್ದರಿಂದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ.
Discussion about this post