ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಹೂಡುವ ಜೊತೆಯಲ್ಲಿ ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಪರಿಹಾರ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಉಕ್ಕು ಸಚಿವ ರಾಮ್ ಚಂದ್ರ ಪ್ರಸಾದ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
Also Read: ಬಲಿಪಶು ಆಗಬೇಡಿ-ಈಗೋ ಬಿಡಿ, ಪರೀಕ್ಷೆ ಬರೆಯಿರಿ: ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಕಿವಿಮಾತು
ಈ ಕುರಿತಂತೆ ವಿಐಎಸ್’ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳಾದ ಅಧ್ಯಕ್ಷ ಬಿ.ಜಿ. ರಾಮಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಆರ್. ನಾಗರಾಜ ಹಾಗೂ ಇನ್ನಿತರರು ದೇವೇಗೌಡರನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ದೇವೇಗೌಡರು ಉಕ್ಕು ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕೇಂದ್ರ ಉಕ್ಕು ಸಚಿವರನ್ನು ಭೇಟಿಯಾಗಿರುವ ದೇವೇಗೌಡರು, ವಿಐಎಸ್’ಎಲ್ ಕಾರ್ಖಾನೆಯಲ್ಲಿ ಇತ್ತೀಚೆಗೆ ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಲಾಗಿದೆ. ಇದರೊಂದಿಗೆ ಅಧಿಕಾರಿಗಳು, ಎಲ್ಲ ಕಾರ್ಮಿಕರು ಹೆಚ್ಚಿನ ಶ್ರಮ ವಹಿಸಿ ಹಗಲಿರುಳು ದುಡಿಯುತ್ತಿದ್ದಾರೆ. ಇದರಿಂದ ಅತಿ ಕಡಿಮೆ ಬಂಡವಾಳದಲ್ಲಿ ಕಾರ್ಖಾನೆ ಲಾಭದತ್ತ ಸಾಗುತ್ತಿದ್ದು, ಇದಕ್ಕೆ ಪೂರಕವಾಗಿ ಹೆಚ್ಚಿನ ಬಂಡವಾಳ ತೊಡಗಿಸಬೇಕು ಎಂದು ಮನವಿ ಮಾಡಿದರು.
Also Read: ಜಿಮ್’ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ: ಕುಸಿದುಬಿದ್ದು ಸಾವನ್ನಪ್ಪಿದ ಬೆಂಗಳೂರು ಮಹಿಳೆ
ನಿವೃತ್ತ ನೌಕರರ ಪರ ಮನವಿ
ಇನ್ನು, ವಿಐಎಎಸ್’ಎಲ್ ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ದೇವೇಗೌಡರು ಸಚಿವರಿಗೆ ಮನವಿ ಮಾಡಿದ್ದಾರೆ.
ಶಿಥಿಲಗೊಂಡಿರುವ ಕಾರ್ಖಾನೆಯ ವಸತಿ ಗೃಹಗಳನ್ನು ಆಡಳಿತ ಮಂಡಳಿ ನಿವೃತ್ತ ಕಾರ್ಮಿಕರಿಗೆ ಲೈಸೆನ್ಸಿಂಗ್ ಸ್ಕೀಂ, ತಾತ್ಕಾಲಿಕ ರಿಟನ್ಷನ್ ಸ್ಕೀಂ ಮತ್ತು ಲಾಂಗ್ ಲೀಸ್ ಸೇರಿದಂತೆ ಇತರೆ ಸ್ಕೀಂಗಳ ಆಧಾರದಲ್ಲಿ ನೀಡಿದೆ. ಇದರಿಂದಾಗಿ ನಿವೃತ್ತ ಕಾರ್ಮಿಕರು ಬಾಡಿಗೆ ಪಾವತಿಸುವಾಗ ಮತ್ತು ಸ್ಕೀಂಗಳ ನವೀಕರಣ ಸಮಯದಲ್ಲಿ ಗೊಂದಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಗೊಂದಲಗಳ ನಿವಾರಣೆಗೆ ಲಾಂಗ್ ಲೀಸ್ ಜೊತೆಗೆ ಯೂನಿಫಾರಂ ಲೀಸ್ ನೀಡುವ ಮೂಲಕ ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ಮನವಿ ಮಾಡಿದ್ದಾರೆ.ದೇವೇಗೌಡರ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಸಚಿವರು ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post