ನವದೆಹಲಿ: ಐಎನ್’ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಾಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ಬಂಧಿಸಲಾಗಿದೆ.
ಕಳೆದ 24 ಗಂಟೆಗಳಿಂದ ನಾಪತ್ತೆಯಾಗಿದ್ದ ಚಿದಂಬರಂ ಅವರನ್ನು ಸಿಬಿಐ ಹಾಗೂ ಇಡಿ ಅಧಿಕಾರಿಗಳು ಇನ್ನಿಲ್ಲದಂತೆ ಹುಡುಕುತ್ತಿದ್ದರು. ಆದರೆ, ಏಕಾಏಕಿ ಚಿದಂಬರಂ ಅವರು ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದರು. ಈ ಮಾಹಿತಿಯನ್ನು ಆಧರಿಸಿ, ಅವರ ನಿವಾಸಕ್ಕೆ ತೆರಳಿದ ಅಧಿಕಾರಿಗಳು ಚಿದಂಬರಂ ಅವರನ್ನು ಬಂಧಿಸಿ ಸಿಬಿಐ ಕೇಂದ್ರ ಕಚೇರಿಗೆ ಕರೆದೊಯ್ದಿದ್ದಾರೆ.
#WATCH P Chidambaram taken away in a car by CBI officials. #Delhi pic.twitter.com/nhE9WiY86C
— ANI (@ANI) August 21, 2019
ಇಂದು ರಾತ್ರಿ ಅವರ ವಿಚಾರಣೆ ನಡೆಯಲಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.
ಬಂಧನಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಚಿದಂಬರಂ, ನನ್ನ ಮೇಲೆ ಸಿಬಿಐ ಈ ವರೆಗೂ ಚಾರ್ಜ್ ಶೀಟ್ ದಾಖಲು ಮಾಡಿಲ್ಲ, ಎಫ್’ಐಆರ್’ನಲ್ಲೂ ನನ್ನ ಹೆಸರನ್ನು ಉಲ್ಲೇಖ ಮಾಡಿಲ್ಲ, ಕಳೆದ 27 ಗಂಟೆಗಳಲ್ಲಿ ಗೊಂದಲಗಳಿಗೆ ಕಾರಣವಾಗಿವೆ. ಈ ಪ್ರಕರಣದಲ್ಲಿ ನಾನು ಆರೋಪಿಯಲ್ಲ ಎಂದರು.

















