ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಹಿರಿಯ ಐಪಿಎಸ್ ಅಧಿಕಾರಿ ರಮಣಗುಪ್ತಾ ಅವರನ್ನು ಎರಡು ದಿನಗಳ ಹಿಂದೆಯಷ್ಟೇ ಬೆಳಗಾವಿ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಈಗ ಏಕಾಏಕಿ ಅವರನ್ನು ಹುಬ್ಬಳ್ಳಿ-ದಾರವಾಢ ಆಯುಕ್ತರನ್ನಾಗಿ ವರ್ಗ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ನಡೆ ಈಗ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ.

- ಲಾಬೂರಾಮ್: ಗುಪ್ತಚರ ಇಲಾಖೆ ಐಜಿಪಿ
- ರಮಣಗುಪ್ತಾ: ಹುಬ್ಬಳ್ಳಿ ಧಾರವಾಡ ಆಯುಕ್ತರು
- ಅನುಪಮ್ ಅಗರವಾಲ್: ಕಲಬುರಗಿ ವಲಯ ಡಿಐಜಿ
- ಎನ್. ಸತೀಶ್ ಕುಮಾರ್: ಬೆಳಗಾವಿ ಉತ್ತರ ಪೂರ್ವ ವಲಯ ಐಜಿಪಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post