ನವದೆಹಲಿ: ಐಆರ್‌ಸಿಟಿಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಪತ್ನಿ ರಾಬ್ರಿ ದೇವಿ ಹಾಗೂ ಪುತ್ರ ತೇಜಸ್ವಿ ಅವರುಗಳಿಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ನವೆಂಬರ್ 19 ಕ್ಕೆ ನಿಗದಿಪಡಿಸಿದೆ.
ಸಿಬಿಐ ಮತ್ತು ಇಡಿ ಸಲ್ಲಿಸಿದ ಪ್ರಕರಣಗಳಲ್ಲಿ ನವೆಂಬರ್ 19 ರಂದು ವಿಡಿಯೋ ಕಾನ್ಫರೆನ್‌ಸ್ ಮೂಲಕ ಲಾಲು ಪ್ರಸಾದ್ ಅವರನ್ನು ಹಾಜರು ಪಡಿಸಲು ನ್ಯಾಯಾಲಯ ಆದೇಶಿಸಿದೆ.
ಕೋರ್ಟ್ ಆದೇಶದಂತೆ ಆರೋಪಿಗಳೆಲ್ಲರೂ 1 ಲಕ್ಷ ರೂ ವೈಯಕ್ತಿಕ ಬಾಂಡ್ ನ್ನು ಕೋರ್ಟ್ ಬಳಿ ಸಲ್ಲಿಸಬೇಕು ಎಂದು ತಿಳಿಸಿದೆ.
Discussion about this post