No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ನೇರ ಸವಾಲು

ಅನ್ಯಾಯ ಎಂದಾದರೆ ರಾಜ್ಯಸಭೆಯಲ್ಲಿ ದೇವೇಗೌಡರು ಮಾತನಾಡುತ್ತಿದ್ದಾಗ ಖರ್ಗೆ ಯಾಕೆ ಸುಮ್ಮನಿದ್ದರು?

kalpa News by kalpa News
February 21, 2024
in ರಾಜಕೀಯ
0
ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ #NarendraModi ಸರಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ #HDKumaraswamy ಅವರು ನೇರ ಸವಾಲು ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು. ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕೂಡಿಸಿಕೊಂಡು ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ ಎತ್ತುತ್ತೇವೆ. ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದೆ ಇಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಸವಾಲು ಹಾಕಿದರು.
ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ ಮುಖ್ಯಮಂತ್ರಿ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂ.ನಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು. 2624 ಕೋಟಿ ರೂ. ಎಸ್’ಡಿಆರ್’ಎಫ್’ನಲ್ಲಿ #SDRF ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತಾರಲ್ಲಾ.. ಈ ಹಣದಲ್ಲಿ 75% ಮೊತ್ತವನ್ನು ಕೇಂದ್ರ ಸರ್ಕಾರವೇ ನೀಡಿದೆ. ಎನ್ ನಾವು ಕೊಟ್ಟೆವು ಎಂದು ಇವರು ಹೇಳಿದ್ದೇ ಹೇಳಿದ್ದು. ನಾನು ಹೇಳೋದೇ ಸತ್ಯ, ನಾನು ಹೇಳೋದೇ ಸತ್ಯ ಎಂದು ಹೇಳ್ತಾನೇ ಇದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯ ಮಾಡು ಎಂದು ನಮ್ಮ ಹಿರಿಯರು ಗಾದೆ ಮಾತು ಹೇಳಿದ್ದಾರೆ, ಅದನ್ನು ನಮ್ಮ ಮುಖ್ಯಮಂತ್ರಿಗಳು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕನ್ನಡಿಗರಿಗೆ ಅನ್ಯಾಯ, ಕನ್ನಡಿಗರಿಗೆ ಅನ್ಯಾಯ ಎಂದು ಜಾಗಟೆ ಹೊಡೆಯುತ್ತಿರಲ್ಲ, ಅಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ ರೂ. ಕೊಡುತ್ತೀರಿ. ಇಲ್ಲಿ ಆನೆ ತುಳಿದು ಸತ್ತರೆ 5 ಲಕ್ಷ ಕೊಡುತ್ತೀರಿ. ಅದನ್ನು ಪಡೆಯುವುದಕ್ಕೆ ಐವತ್ತು ಸಲ ಕಚೇರಿಗಳಿಗೆ ಅಳೆಯಬೇಕು. ನಿಮ್ಮ ನೀತಿ ಹೇಗಿದೆ ಎಂದರೆ; ರಾಜ್ಯಕ್ಕೆ ಅನ್ಯಾಯ! ಕೇರಳಕ್ಕೆ ನ್ಯಾಯ!! ಎನ್ನುವಂತೆ ಆಗಿದೆ ಎಂದರು ಮಾಜಿ ಮುಖ್ಯಮಂತ್ರಿಗಳು.
ಸಿದ್ದರಾಮಯ್ಯ ಅವರು ತಮ್ಮ ರಾಷ್ಟ್ರೀಯ ನಾಯಕರ ಸಲಹೆ ಮೇರೆಗೆ 15 ಲಕ್ಷ ರೂ. ಕೊಟ್ಟಿದ್ದಾರೆ. ನಾನೆಲ್ಲೂ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂದು ಹೇಳಿಲ್ಲ. ನಮ್ಮ ರೈತರಿಗೆ ಬರ ಪರಿಹಾರ ಎಂದು ಎರಡು ಸಾವಿರ ರೂ. ಘೋಷಣೆ ಮಾಡುತ್ತಾರೆ. ಕೇರಳದವಗೆ 15 ಲಕ್ಷ ರೂ. ಕೊಡುತ್ತಾರೆ. ಕೇಳಿದರೆ ಕೇಂದ್ರದಿಂದ ಪರಿಹಾರವೇ ಬಂದಿಲ್ಲ ಅಂತ ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯ ಆಗಿದೆ ಎನ್ನುತ್ತಾರೆ. ಸಾವಿರ ಸಲ ಸುಳ್ಳು ಹೇಳಿ ಅದನ್ನೇ ನಿಜ ಮಾಡುವ ರೀತಿ ಇವರು ಬರೀ ಸುಳ್ಳುಗಳನ್ನ್ನೆ ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಹಣಕಾಸು ಆಯೋಗದ ಮುಂದೆ ಮಾಹಿತಿ ಕೊಡಿ
ರಾಜ್ಯ ರಾಜ್ಯ ಸರಕಾರಕ್ಕೆ ನನ್ನ ಸಲಹೆ ಇಷ್ಟೇ. ಈಗ 16ನೇ ಹಣಕಾಸು ಆಯೋಗ ರಚನೆ ಆಗಿದೆ. ಆಯೋಗ ರಾಜ್ಯಕ್ಕೆ ಬಂದಾಗ ಸರಿಯಾದ ಮಾಹಿತಿ ಕೊಟ್ಟು ಹಕ್ಕು ಮಂಡಿಸಿ.ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟರೆ ಅಥವಾ ದೂರಿದರೆ ಉಪಯೋಗ ಇಲ್ಲ. ತೆರಿಗೆ ಪಾಲು, ಅನುದಾನ ಹಂಚಿಕೆ ಮಾಡುವುದು ಆಯೋಗವೇ ಹೊರತು ಕೆಂದ್ರವಲ್ಲ. ಈಗಾಗಲೇ ಕೇಂದ್ರದಿಂದ ಬಂದಿರುವ ಹಣವನ್ನು ಸರ್ಕಾರ ಸದ್ಬಳಕೆ ಮಾಡಿಲ್ಲ. ಆ ಬಗ್ಗೆ ಇವರು ಚಕಾರ ಎತ್ತುತ್ತಿಲ್ಲ ಎಂದು ಅವರು ದೂರಿದರು.
ಖರ್ಗೆ ಯಾಕೆ ಸುಮ್ಮನೆ ಇದ್ದರು?
ರಾಜ್ಯಕ್ಕೆ ಅನ್ಯಾಯ ಆದರೆ ನಾವು ಸುಮ್ಮನೆ ಇರುವ ಪ್ರಶ್ನೆಯೇ ಇಲ್ಲ. ರಾಜ್ಯಸಭೆಯಲ್ಲಿ ಮೇಕೆದಾಟು ವಿಷಯದಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಮಾತನಾಡಿದಾಗ ರಾಜ್ಯವನ್ನು ಪ್ರತಿನಿಧಿಸುವ ಕಾಂಗ್ರೆಸ್ ಸದಸ್ಯರು ಯಾಕೆ ಬೆಂಬಲ ಕೊಡಲಿಲ್ಲ? ಅವರು ದನಿ ಎತ್ತಿದರೆ ನಿಮ್ಮ ಪಕ್ಷದ ಒಬ್ಬರೂ ಮಾತನಾಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಇದ್ದರಲ್ಲ, ಭಾವೀ ಪ್ರಧಾನಿ ಎಂದು ಹೇಳಿಕೊಂಡು ತಿರುಗುತ್ತಿದ್ದಿರಿ. ಅವರೇಕೆ ಮಾತನಾಡಲಿಲ್ಲ? ಇಲ್ಲಿ ಅನ್ಯಾಯ ಆಗಿದ್ದರೆ ಅವರು ಬಾಯಿ ತೆಗೆಯಬೇಕಿತ್ತಲ್ಲ.. ಅವರು ಯಾಕೆ ಮೌನವಾಗಿ ಇದ್ದರು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವರಾದ ಸಿಸಿ ಪಾಟೀಲ್, ಶಾಸಕರಾದ ಸಮೃದ್ಧಿ ಮಂಜುನಾಥ್, ಕರೆಮ್ಮ ನಾಯಕ್ ಅವರು ಈ ಸಂದರ್ಭದಲ್ಲಿ ಇದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BENGALURUH D Kumara SwamyKannada News WebsiteLatest News KannadaPolitical NewsSiddharamaiahಎಚ್.ಡಿ. ದೇವೇಗೌಡನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯಸಭೆಹೆಚ್.ಡಿ. ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧ ಆಯ್ಕೆ

Next Post

ಧಮ್ಕಿ ಸಂಸ್ಕೃತಿ ಯಾರದ್ದು? ಸೆಟ್ಲ್’ಮೆಂಟ್ ಮಾಡುತ್ತೇನೆ ಎಂದವರು ಯಾರು? ಡಿಕೆಶಿಗೆ ಎಚ್’ಡಿಕೆ ಪ್ರಶ್ನೆ

kalpa News

kalpa News

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಧಮ್ಕಿ ಸಂಸ್ಕೃತಿ ಯಾರದ್ದು? ಸೆಟ್ಲ್'ಮೆಂಟ್ ಮಾಡುತ್ತೇನೆ ಎಂದವರು ಯಾರು? ಡಿಕೆಶಿಗೆ ಎಚ್’ಡಿಕೆ ಪ್ರಶ್ನೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL