ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಆರು ವರ್ಷ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ #GangRape ನಡೆಸಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ #NewDelhi ಭಜನ್ಪುರದಲ್ಲಿ ನಡೆದಿದೆ.
10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದು, ಇವರಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ.
ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ.
ಈ ಘಟನೆ ಜ.18 ರ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂತರ ಹುಡುಗಿಯ ಕುಟುಂಬವು ಪೊಲೀಸರಿಗೆ ದೂರು ನೀಡಿತ್ತು. ಮೂವರು ಹುಡುಗರು ಹುಡುಗಿಯನ್ನು ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾರೆ ಎಂದು ವರದಿಯಾಗಿದೆ.
ಆರೋಪಿಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಯ #JuvenileJusticeBoard ಮುಂದೆ ಹಾಜರುಪಡಿಸಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಮೂರನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.
ಮೂರನೇ ಆರೋಪಿಯನ್ನು ಪತ್ತೆ ಹಚ್ಚಲು ಶೋಧ ತಂಡವನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















