ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ #BLSanthosh ಅವರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DKShivakumar ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಅವರಿಗೂ ನಮಗೂ ರಾಜಕೀಯವಾಗಿ 100 ವಿರೋಧ ಇರಬಹುದು. ಏನೇ ಹೋರಾಟ ಮಾಡುವುದಿದ್ದರೂ ಸೈದ್ಧಾಂತಿಕವಾಗಿ ಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕವಾಗಿ ತೇಜೋವಧೆ ಮಾಡಬಾರದು. ಈ ಕಾರಣಕ್ಕಾಗಿಯೇ ತಿಮರೋಡಿಯನ್ನು #MaheshTimarodi ಒದ್ದು ಒಳಗೆ ಹಾಕಿದ್ದೀವೆ ಎಂದರು.

ವಿರೋಧಿಗಳ ವಿರುದ್ಧ ಮಾತನಾಡಿದ್ದಾನೆ ಎಂದು ನಾವು ಖುಷಿ ಪಡುವುದಲ್ಲ. ಮುಂದೆ ನಮ್ಮ ವಿರುದ್ಧವೂ ಆತ ಮಾತನಾಡಬಹುದು. ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇವುಗಳಿಗೆಲ್ಲ ನಾವು ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿ.ಎಲ್. ಸಂತೋಷ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಬ್ರಹ್ಮಾವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿಂದ ತೆರಳಿದ್ದ ಪೊಲೀಸರು, ಸ್ಥಳೀಯ ಪೊಲೀಸರ ಸಹಕಾರದಲ್ಲಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದರು.

ತಿಮರೋಡಿ ವಿರುದ್ಧ ಎಫ್’ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯುಲು ಪೊಲೀಸರು ಆತನ ಉಜಿರೆಯ ಮನೆಗೆ ಬಂದ ವೇಳೆ ಹೈಡ್ರಾಮಾ ನಡೆದಿತ್ತು.
ತಿಮರೋಡಿಯನ್ನು ವಶಕ್ಕೆ ಪಡೆಯಲು ಪೊಲೀಸರು ಆತನ ಮನೆಗೆ ಬಂದು ವಿಚಾರಿಸಿದಾಗ ಮನೆಯ ಒಳಗಿz್ದೆÃ ಇಲ್ಲದಂತೆ ತಿಮರೋಡಿ ಬೆಂಬಲಿಗರು ಬಿಂಬಿಸಿದ್ದಾರೆ ಎಂದು ವರದಿಯಾಗಿದೆ.
ತಿಮರೋಡಿ ಬೆಂಬಲಿಗರು, ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ನೀವು ವಿಚಾರಣೆಗೆ ಕಡೆಯಿರಿ, ನಾವೇ ಬರುತ್ತೇವೆ. ಆದರೆ, ಈ ರೀತಿ ವಶಕ್ಕೆ ಪಡೆಯವುದು ಸರಿಯಲ್ಲ ಎಂದು ವಿರೋಧಿಸಿದ್ದರು.
ಈ ವೇಳೆ ಮನೆಯನ್ನು ಪರಿಶೀಲನೆ ನಡೆಸಲು ಮುಂದಾದ ವೇಳೆಯೂ ಸಹ ವಿರೋಧಿಸಿದ್ದು, ಪಟ್ಟು ಬಿಡದ ಪೊಲೀಸರು ಒಳಕ್ಕೆ ತೆರಳಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದರು.

ಬಿ.ಎಲ್. ಸಂತೋಷ್ ವೈಯಕ್ತಿಕ ವಿಚಾರಗಳ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ತಿಮರೋಡಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಉಡುಪಿ ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತಿಮರೋಡಿಯನ್ನು ವಶಕ್ಕೆ ಪಡೆಯುವ ಮುನ್ನ ಹೆಚ್ಚಿನ ಜಾಗ್ರತೆ ವಹಿಸಿರುವ ಪೊಲೀಸರು, 4-5 ಪೊಲೀಸ್ ಅಧಿಕಾರಿಗಳು ಹಾಗೂ ಹೆಚ್ಚಿನ ಸಿಬ್ಬಂದಿಗಳೊಂದಿಗೆ ತೆರಳಿದ್ದರು. ತಿಮರೋಡಿ ನಿವಾಸಕ್ಕೆ ತೆರಳಿದ ವೇಳೆ ಬೆಂಬಲಿಗರ ಕಡೆಯಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post