No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೇಸಿಗೆಗೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇದೆಯೇ? ಸಚಿವ ಜಾರ್ಜ್ ಮಹತ್ವದ ಹೇಳಿಕೆ

ಐಪಿ ಸೆಟ್'ಗಳಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 1, 2025
in ರಾಷ್ಟ್ರೀಯ
0
ಬೇಸಿಗೆಗೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇದೆಯೇ? ಸಚಿವ ಜಾರ್ಜ್ ಮಹತ್ವದ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ #LoadShedding ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

“ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

Also Read>> ನೈಋತ್ಯ ರೈಲ್ವೆ ವಲಯ | ನೂತನ ಪ್ರಧಾನ ವ್ಯವಸ್ಥಾಪಕರಾಗಿ ಮುಕುಲ್ ಸರನ್ ಮಾಥೂರ್ ಅಧಿಕಾರ ಸ್ವೀಕಾರ

“ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ #PowerSupply ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ. ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ, ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ. ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಅರ್ಥ” ಎಂದು ತಿಳಿಸಿದರು.
ಇಂಧನ ಭದ್ರತೆಗೆ ಪಂಪ್ಡ್‌ ಸ್ಟೋರೇಜ್‌, ಬ್ಯಾಟರಿ ಸ್ಟೋರೇಜ್
“ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್‌ ಉತ್ಪಾದನೆ ಆದರೂ, ಸಂಗ್ರಹಣೆಗೆ ಅವಕಾಶ ಇಲ್ಲ. ಹೀಗಾಗಿ, ಶರಾವತಿ ಪಂಪ್ಡ್‌ ಸ್ಟೋರೇಜ್‌ ಮೂಲಕ 2000 ಮೆ.ವ್ಯಾ. ವಾರಾಹಿ ಪಂಪ್ಡ್‌ ಸ್ಟೋರೇಜ್‌ ಮೂಲಕ 1600 ಮೆ.ವ್ಯಾ. ಪಾವಗಡದಲ್ಲಿ 1000 ಮೆ.ವ್ಯಾ.ಸಾಮರ್ಥ್ಯ ಹಾಗೂ ರ‍್ಯಾಪ್ಟೆಯಲ್ಲಿ 2000 ಮೆ.ವ್ಯಾ. ಸಾಮರ್ಥ್ಯದ ಬ್ಯಾಟರಿ ಸ್ಟೋರೇಜ್‌ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಇದರಿಂದ ರಾಜ್ಯದಲ್ಲಿ ವಿದ್ಯುತ್‌ ಕೊರತೆಯಾಗದಂತೆ ನೋಡಿಕೊಳ್ಳಬಹುದು,”ಎಂದರು.

ವಿದ್ಯುತ್‌ ಉತ್ಪಾದನೆ ವಿವರ
“ಫೆಬ್ರವರಿ 27ರ ಮಾಹಿತಿ ಪ್ರಕಾರ, ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ 3,300 ಮೆ.ವ್ಯಾ., ಜಲ ವಿದ್ಯುತ್ ಘಟಕಗಳಲ್ಲಿ 2000 ಮೆ.ವ್ಯಾ. ವಿದ್ಯುತ್ ಉತ್ಪಾದನೆಯಾಗಿದೆ. ಅದೇ ರೀತಿ ಯುಪಿಸಿಎಲ್ ನಿಂದ 1,26 ಮೆ.ವ್ಯಾ., ಸೋಲಾರ್ ಮೂಲಕ 6,655 ಮೆ.ವ್ಯಾ., ಪವನ ಮೂಲಕ 1940 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಇದಲ್ಲದೆ, ಸಿಜಿಎಸ್ (ಸೆಂಟ್ರಲ್ ಜೆನರೇಟಿಂಗ್ ಸ್ಟೇಷನ್ಸ್)ನಿಂದ 6,183 ಮೆ.ವ್ಯಾ. ವಿದ್ಯುತ್ ಬಂದಿದ್ದರೆ,ಕೇಂದ್ರ ಗ್ರಿಡ್ ನಿಂದ 600 ಮೆಗಾವ್ಯಾಟ್ ವಿದ್ಯುತ್ ಖರೀದಿಸಲಾಗಿದೆ. ಪಂಜಾಬ್ ಮತ್ತು ಉತ್ತರಪ್ರದೇಶದಿಂದ ವಿನಿಮಯ ಆಧಾರದ ಮೇಲೆ 700 ಮೆಗಾ ವ್ಯಾಟ್ ವಿದ್ಯುತ್ ಪಡೆಯಲಾಗಿದೆ” ಎಂದು ತಿಳಿಸಿದರು.
“ಇದಲ್ಲದೆ, ವಿದ್ಯುತ್ ಬೇಡಿಕೆ ಪೂರೈಸಲು ಶನಿವಾರ (ಮಾ. 1) ಕೂಡ್ಗಿಯಿದ ಹೆಚ್ಚುವರಿಯಾಗಿ 310 ಮೆಗಾವ್ಯಾಟ್ ವಿದ್ಯುತ್ ಪಡೆಯಲಾಗುತ್ತದೆ. ಜತೆಗೆ ಬೇಡಿಕೆ ಆಧರಿಸಿ ವಿನಿಮಯ ಆಧಾರದ ಮೇಲೆ ಉತ್ತರ ಪ್ರದೇಶದಿಂದ ದಿನಕ್ಕೆ 100ರಿಂದ 1,275 ಮೆ.ವ್ಯಾ. ಮತ್ತು ಪಂಜಾಬ್‌ನಿಂದ 300 ಮೆ.ವ್ಯಾ. ವಿದ್ಯುತ್ ತೆಗೆದುಕೊಳ್ಳಲಾಗುವುದು. ಅಲ್ಲದೆ, ಜೂನ್ ಮೊದಲ ವಾರದವರೆಗೆ ಪ್ರತಿನಿತ್ಯ 1000 ಮೆ.ವ್ಯಾ. ವಿದ್ಯುತ್ ಖರೀದಿಸಲಾಗುವುದು” ಎಂದು ಮಾಹಿತಿ ನೀಡಿದರು.

ಲಿಂಕ್‌ಲೈನ್ ಮೂಲಕ ಬೇಡಿಕೆ ಈಡೇರಿಸಲು ಕ್ರಮ
“ರಾಜ್ಯದ ಕೆಲವು ಸಬ್ ಸ್ಟೇಷನ್ ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿ ಓವರ್ ಲೋಡ್ ಆಗುತ್ತಿದೆ. ಇನ್ನು ಕೆಲವು ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದ್ದು, ಅಂಡರ್ ಲೋಡ್ ಆಗುತ್ತಿದೆ. ಈ ಸಮಸ್ಯೆ ತಪ್ಪಿಸಲು ಅಂಡರ್ ಲೋಡ್ ಇರುವ ಉಪಕೇಂದ್ರಗಳಿಂದ ಓವರ್ ಲೋಡ್ ಇರುವ ಉಪಕೇಂದ್ರಗಳಿಗೆ ವಿದ್ಯುತ್ ಒದಗಿಸಲು ಲಿಂಕ್ ಲೈನ್ ವ್ಯವಸ್ಥೆಗೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಕೆಲವು ಕಡೆ ಲಿಂಕ್ ಲೈನ್ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ” ಎಂದು ಹೇಳಿದರು.
“ರಾಜ್ಯದಲ್ಲಿ ಸಾಕಷ್ಟು ವಿದ್ಯುತ್ ಲಭ್ಯವಿದ್ದರೂ ಅದರ ಪ್ರಸರಣ ಮತ್ತು ವಿತರಣೆಯೇ ಸಮಸ್ಯೆಯಾಗಿದೆ. ಇದನ್ನು ತಪ್ಪಿಸಲು ಸಬ್ ಸ್ಟೇಷನ್ ಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 100 ಹೊಸ ಸಬ್ ಸ್ಟೇಷನ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಮುಂದಿನ ಎರಡು ವರ್ಷದಲ್ಲಿ ಪ್ರಸರಣ ಮತ್ತು ವಿತರಣೆಯಲ್ಲಿ ಇರುವ ಸಮಸ್ಯೆಗಳನ್ನು ಬಹುತೇಕ ಬಗೆಹರಿಸಲು ಕ್ರಮ ವಹಿಸಲಾಗುತ್ತಿದೆ” ಎಂದು ತಿಳಿಸಿದರು.

ಸಿಂಗಲ್ ಫೇಸ್ ನಲ್ಲಿ ಐಪಿ ಸೆಟ್ ಹಾಕಬೇಡಿ
“ಗೃಹ ಬಳಕೆಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಬೇಕು ಎಂಬ ಉದ್ದೇಶದಿಂದ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ನಿರಂತರ ಜ್ಯೋತಿ ಯೋಜನೆ ಜಾರಿಗೆ ತಂದಿದೆ. ಅಲ್ಲದೆ, ತೋಟದ ಮನೆಗಳಲ್ಲಿ ವಾಸಿಸುವವರು ಅನುಕೂಲಕ್ಕಾಗಿ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಸಿಂಗಲ್ ಫೇಸ್ ವಿದ್ಯುತ್ ಪೂರೈಸುವ ಸಂದರ್ಭದಲ್ಲಿ ರೈತರು ಕನ್ವರ್ಟರ್‌ಗಳನ್ನು ಬಳಸಿ ಕೃಷಿ ಪಂಪ್‌ಸೆಟ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಟ್ರಿಪ್ ಆಗಿ ಇಡೀ ಪ್ರದೇಶದಲ್ಲೇ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನರು ತೊಂದರೆಗೊಳಗಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಗೆ ಕನ್ವರ್ಟರ್ ಅಳವಡಿಸಿ ಐಪಿ ಸೆಟ್ ಗಳನ್ನು ಬಳಸಬಾರದು” ಎಂದು ಮನವಿ ಮಾಡಿದರು.

“ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯುತ್ ಬೇಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ವರ್ಷದ ಫೆ. 27ರಂದು 16,214 ಮೆ.ವ್ಯಾ. ಬೇಡಿಕೆ ಇದ್ದರೆ ಈ ವರ್ಷ ಅದೇ ದಿನ 17,874 ಮೆ.ವ್ಯಾ. ಬೇಡಿಕೆ ಬಂದಿತ್ತು. ಈ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸಲಾಗಿದೆ. ಜೂನ್ ಮೊದಲ ವಾರದವರೆಗೆ ಯಾವುದೇ ಸಮಸ್ಯೆ ಇಲ್ಲದಂತೆ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ”.
-ಗೌರವ್ ಗುಪ್ತ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ

ಸುದ್ದಿಗೋಷ್ಠಿಯಲ್ಲಿ ಕ್ರೆಡಲ್‌ ಅಧ್ಯಕ್ಷ ಟಿ.ಡಿ ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ, ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಪಿಸಿಕೆಎಲ್‌ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್‌ ಸುಧಾಕರ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ್‌ ಸೇರಿದಂತೆ ಎಲ್ಲ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BESCOMK J GeorgeKannada News WebsiteLatest News KannadaLoad sheddingMESCOMPower supplySummerಇಂಧನ ಇಲಾಖೆಕೆ.ಜೆ. ಜಾರ್ಜ್ಗೌರವ್ ಗುಪ್ತಬೆಂಗಳೂರುಬೇಸಿಗೆಲೋಡ್ ಶೆಡ್ಡಿಂಗ್ವಿದ್ಯುತ್
Share196Tweet123Send
Previous Post

ನೈಋತ್ಯ ರೈಲ್ವೆ ವಲಯ | ನೂತನ ಪ್ರಧಾನ ವ್ಯವಸ್ಥಾಪಕರಾಗಿ ಮುಕುಲ್ ಸರನ್ ಮಾಥೂರ್ ಅಧಿಕಾರ ಸ್ವೀಕಾರ

Next Post

No Load Shedding Expected In This Summer: Minister George

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
No Load Shedding Expected In This Summer: Minister George

No Load Shedding Expected In This Summer: Minister George

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

April 14, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

April 14, 2026
ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL