ಕಲ್ಪ ಮೀಡಿಯಾ ಹೌಸ್ | ಇಸ್ಲಾಮಾಬಾದ್ |
ಅಪರಿಚಿತ ಬಂದೂಕುಧಾರಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ಮಲಗಿದ್ದ 7 ಮಂದಿ ಕಾರ್ಮಿಕರು ಭೀಕರವಾಗಿ ಹತ್ಯೆಯಾಗಿರುವ ಘಟನೆ ಪಾಕಿಸ್ಥಾನದ ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದಾರ್ ಬಂದರಿನಲ್ಲಿ ನಡೆದಿದೆ.
ಬಂದರಿನ ಬಳಿಯಿರುವ ಕ್ವಾಟ್ರಸ್’ನಲ್ಲಿ ಘಟನೆ ನಡೆದಿದ್ದು, ಜನನಿಬಿಡ ಪ್ರದೇಶದಲ್ಲೇ ಕೃತ್ಯ ಎಸಗಿರುವುದು ಅತಂಕಕ್ಕೆ ಕಾರಣವಾಗಿದೆ.

Also read: ಮೇ 18 | ಎಟಿಎನ್’ಸಿಸಿ ಕಾಲೇಜಿನಲ್ಲಿ ಆಚಾರ್ಯ ಅದ್ವಿತೀಯ | ರಾಜ್ಯಮಟ್ಟದ ಸಾಂಸ್ಕೃತಿಕ ಉತ್ಸವ
ಘಟನೆಯಲ್ಲಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ಗ್ವಾದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿಗೀಡಾದ 7 ಕಾರ್ಮಿಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















Discussion about this post