ಕಲ್ಪ ಮೀಡಿಯಾ ಹೌಸ್ | ಇಸ್ಲಾಮಾಬಾದ್ |
ಮಗುವಿನ ತಲೆ ತಾಯಿ ಗರ್ಭಕೋಶದಲ್ಲಿಯೇ ಬಿಟ್ಟ ಪರಿಣಾಮ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಪಾಕಿಸ್ತಾನದ ಸಿಂಥ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ತಾರ್ಪಾರ್ಕರ್ ಜಿಲ್ಲೆಯ ಹಳ್ಳಿಯೊಂದಕ್ಕೆ ಸೇರಿದ 32 ವರ್ಷದ ಹಿಂದೂ ಮಹಿಳೆ, ಸಮೀಪದ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು. ಈ ವೇಳೆ ಮಹಿಳಾ ಡಾಕ್ಟರ್ ಇಲ್ಲದೇ ಇರುವ ಕಾರಣ ಅನುಭವಿ ಸಿಬ್ಬಂದಿ ಶಸ್ತ್ರಚಿಕಿತ್ಸೆ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಹೊಟ್ಟೆಯಲ್ಲಿಯೇ ಬಿಟ್ಟಿರುವ ಘಟನೆ ನಡೆದಿದೆ ಎಂದು ಜಮ್ಶೊರೊದಲ್ಲಿರುವ ಲಿಯಾಕತ್ ಯೂನಿವರ್ಸಿಟಿ ಆಫ್ ಮೆಡಿಕಲ್ ಅಂಡ್ ಹೆಲ್ತ್ ಸೈನ್ಸಸ್‍ನ ಸ್ತ್ರೀ ರೋಗ ಶಾಸ್ತ್ರ ಘಟಕದ ಮುಖ್ಯಸ್ಥರಾದ ರಾಹೀಲ್ ಸಿಕಂದರ್ ತಿಳಿಸಿದ್ದಾರೆ
ನಂತರ ಮಹಿಳೆ ಸ್ಥಿತಿ ಗಂಭೀರವಾದಾಗ ಆಕೆಯನ್ನು ಮಿಥಿಯ ಹತ್ತಿರದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆಸ್ಪತ್ರೆಗೆ ಭೇಟಿ ನೀಡಿದ ಮಹಿಳೆಯ ಕುಟುಂಬಸ್ಥರ ಮನವಿ ಮೇರೆಗೆ ಶಸ್ತ್ರಚಿಕಿತ್ಸೆಯ ಮೂಲಕ ಮಗುವಿನ ತಲೆಯನ್ನು ಹೊರತೆಗೆದು ಆಕೆಯ ಜೀವವನ್ನು ಉಳಿಸಲಾಯಿತು ಎಂದು ವೈದ್ಯರು ಹೇಳಿದ್ದಾರೆ.
Also read: ಭದ್ರತಾ ಪಡೆಗಳ ಎನ್‍ಕೌಂಟರ್: ಓರ್ವ ಉಗ್ರ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post