Read - < 1 minuteನವದೆಹಲಿ: ಮುಂಬಡ್ತಿ ನೀಡುವ ವೇಳೆ ಎಸ್‌ಸಿ ಹಾಗೂ ಎಸ್‌ಟಿ ಮೀಸಲಾತಿ ನೀಡವುದು ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.
ಈ ಕುರಿತಂತೆ ಇಂದು ತೀರ್ಪು ಪ್ರಕಟಿಸಿರುವ ಏಳು ನ್ಯಾಯಾಧೀಶರಿದ್ದ ಸುಪ್ರೀಂ ಪೀಠ ಈ ವಿಚಾರದಲ್ಲಿ 2006ರ ಆದೇಶವನ್ನು ಮರುಪರಿಶೀಲಿಸುವ ಅಗತ್ಯವಿಲ್ಲ. ಬಡ್ತಿ ನೀಡುವ ವೇಳೆ ಎಸ್‌ಸಿ, ಎಸ್‌ಟಿ ಎಂದು ದೃಢೀಕರಿಸಲು ಮತ್ತೆ ದಾಖಲಾತಿ ಪಡೆಯುವ ಅಗತ್ಯವಿಲ್ಲ ಎಂದು ಹೇಳಿದೆ.
2006ರ ತೀರ್ಪನ್ನು ಎತ್ತಿ ಹಿಡಿದಿರುವ ನ್ಯಾಯಾಲಯ, ಹಿಂದುಳಿದವರು ಎಂದು ಹೇಳಲು ಮತ್ತೆ ಮಾಹಿತಿ ಸಂಗ್ರಹಿಸುವ ಅಗತ್ಯವಿಲ್ಲ. ಬಡ್ತಿಯಲ್ಲಿ ಮೀಸಲಾತಿ ನೀಡುವ ಅಗತ್ಯವಿಲ್ಲ. ಆದಾಗ್ಯೂ, ಬಡ್ತಿ ನೀಡುವುದು, ಬಿಡುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ನ್ಯಾಯಪೀಠ ಹೇಳಿದೆ.
Also read: ಆಧಾರ್‌ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್
https://kalpa.news/the-supreme-court-granted-a-constitutional-recognition-to-aadhaar/
2006ರ ತೀರ್ಪಿನ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ, ಎಂ.ನಾಗರಾಜ್ ಪ್ರಕರಣದ ತೀರ್ಪನ್ನು ಏಳು ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಪ್ರಕಟಿಸಿದರು.
ತೀರ್ಪು ಮರು ಪರಿಶೀಲಿಸುವಂತೆ ಮತ್ತು ಷರತ್ತುಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರ, ವಿವಿಧ ರಾಜ್ಯ ಸರ್ಕಾರಗಳು ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಪ್ರಾತಿನಿಧ್ಯದ ಕೊರತೆ ಮತ್ತು ಒಟ್ಟು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು ಏಳು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠವು ಎಂ.ನಾಗರಾಜ್ ಪ್ರಕರಣದಲ್ಲಿ 2006ರಲ್ಲಿ ತೀರ್ಪು ನೀಡಿತ್ತು.
ಎಸ್‌ಸಿ ಮತ್ತು ಎಸ್‌ಟಿ ಸಮುದಾಯವು ಒಮ್ಮೆ ಉದ್ಯೋಗಕ್ಕೆ ಸೇರಿದ ಮೇಲೆ ಅವರ ಹಿಂದುಳಿದಿರುವಿಕೆ ನಿವಾರಣೆಯಾಗಿರುತ್ತದೆ. ದರ್ಜೆ-3 ಮತ್ತು ದರ್ಜೆ-4ರ ಹುದ್ದೆಗಳಿಗೆ ಮಾತ್ರ ಬಡ್ತಿ ಮೀಸಲಾತಿ ನೀಡಬಹುದು. ಉನ್ನತ ಹುದ್ದೆಗಳಲ್ಲಿರುವವರಿಗೆ ಬಡ್ತಿ ಮೀಸಲು ಸೌಲಭ್ಯ ಕಲ್ಪಿಸಬಾರದು ಎಂದು ಉದ್ಯೋಗದಲ್ಲಿ ಬಡ್ತಿ ಮೀಸಲು ವಿರೋಧಿಸುತ್ತಿರುವ ಅರ್ಜಿದಾರರ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ವಾದಿಸಿದ್ದರು.
Also read: ಯಾವುದಕ್ಕೆ ಆಧಾರ್ ಕಡ್ಡಾಯ, ಕಡ್ಡಾಯವಿಲ್ಲ: ಇಲ್ಲಿದೆ ಪಟ್ಟಿ
Discussion about this post