ಭದ್ರಾವತಿಃ ಚುನಾಯಿತ ಪ್ರತಿನಿಧಿಗಳು ಇಚ್ಛಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿದ್ದಲ್ಲಿ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ ಹೇಳಿದರು.
ಅವರು ಹಳೇನಗರದ ಬಲಿಜ ಸಮುದಾಯ ಭವನದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಾಸಕನಾಗಿ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದ್ದು ಎಲ್ಲರ ಸಹಕಾರ ಸಲಹೆ ಅಗತ್ಯ ಎಂದರು.
ಪಕ್ಷವು ಆರಂಭಿಸಿರುವ ಸದಸ್ಯತ್ವ ಭೂತ್ ಮಟ್ಟದ ಅಭಿಯಾನದಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಶಕ್ತಿ ತುಂಬುವ ಕೆಲಸವಾಗಬೇಕು. ಪಕ್ಷದ ಬೆಳವಣಿಗೆಗೆ ಸಹಕರಿಸುವುದರಿಂದ ರಾಷ್ಟç ಯುವ ನಾಯಕ ರಾಹುಲ್ ಗಾಂಧಿರವರ ಆಸೆ ನೆರವೇರಲಿದೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಹಿಂದಿನಿಂದಲೂ ಹಿಂದುಳಿದ ವರ್ಗದವರಿಗೆ, ಪರಿಶಿಷ್ಠ ಜಾತಿ ಪಂಗಡದವರಿಗೆ ವಿದ್ಯಾಭ್ಯಾಸ, ಉದ್ಯೋಗದಲ್ಲಿ ಮೀಸಲಾತಿ, ವಿದ್ಯಾರ್ಥಿವೇತನ ಮುಂತಾದ ಹಲವು ಸೌಲಭ್ಯಗಳನ್ನು ನೀಡುತ್ತಾ ಬಂದಿದೆ. ಹಿಂದುಳಿದ ವರ್ಗಗಳ ಅನೇಕರು ಸೌಲಭ್ಯಗಳನ್ನು ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಮೀಸಲಾತಿ ಸೌಲಭ್ಯ ಪಡೆದಿರುವ ಜನರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಯತ್ತ ಮುಖಮಾಡಿ ಪ್ರಧಾನಿ ನರೇಂದ್ರ ಮೋದಿಯನ್ನು ಹಾಡಿ ಹೊಗಳುತ್ತಿರುವುದು ವಿಷಾಧನೀಯ ಎಂದರು.
60 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಅನೇಕ ಅಭಿವೃದ್ದಿ ಕಾರ್ಯಗಳನ್ನು ಮಾಡಿ ದೇಶವನ್ನು ಸಮೃದ್ದಿ ಪಥದತ್ತ ಮಾಡಿದೆ. ರಾಮಮಂದಿರ, ಶಬರಿಮಲೆ ದೇವಾಲಯಗಳ ಹೆಸರಲ್ಲಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತದಾರರಿಗೆ ಸುಳ್ಳು ಆಮಿಷ ತೋರುತ್ತಿರುವ ಬಿಜೆಪಿ ಪಕ್ಷದ ನಿಜ ಬಣ್ಣ ಬಯಲಾಗಿದೆ. ಜಿಎಸ್‌ಟಿ ಜಾರಿ ಮಾಡಿ ಸಾಮಾನ್ಯ ಜನರನ್ನು ತಪ್ಪು ಮಾರ್ಗಕ್ಕೆ ಕರೆದ್ಯೊಯ್ಯುತ್ತಿರುವ ಪಕ್ಷಕ್ಕೆ ಬೆಂಬಲ ನೀಡದೆ ಹಿಂದುಳಿದವರ, ಅಲ್ಪ ಸಂಖ್ಯಾತರ ಹಾಗು ಪರಿಶಿಷ್ಟ ಜಾತಿ ವರ್ಗಗಳು ಸೇರಿದಂತೆ ಎಲ್ಲಾ ವರ್ಗಗಳ ಅಭಿವೃದ್ದಿಗೆ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತಾದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ, ರಾಜೀವ್ ಗಾಂಧಿ, ದೇವರಾಜ ಅರಸ್, ಸಿದ್ದರಾಮಯ್ಯ ಇವರುಗಳ ಶ್ರಮ ಅನನ್ಯ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ. ಚಂದ್ರೇಗೌಡ ಮಾತನಾಡಿ ಪಕ್ಷ ನೂತನವಾಗಿ ಆರಂಭಿಸಿರುವ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಕಾರ್ಯಕರ್ತರು ಭೂತ್ ಮಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡುವ ಮೂಲಕ ಪಕ್ಷದ ಬಲವರ್ದನೆಗೆ ಶ್ರಮಿಸುವಂತೆ ಕರೆನೀಡಿದರು.
ಹಿಂದುಳಿದ ವರ್ಗಗಳ ವಿಭಾಗದ ಎಐಸಿಸಿ ಸಂಯೋಜಕ ಎಚ್.ವಿ. ಸತೀಶ್ ಕುಮಾರ್ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥ ಶರ್ಮ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ಮುಖಂಡರಾದ ವೇಣುಗೋಪಾಲ್, ಬಿ.ಟಿ. ನಾಗರಾಜ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಜಯಪ್ಪ. ಬಿ.ಎಸ್. ಗಣೇಶ್, ರಾಘವೇಂದ್ರ, ರಾಮಕೃಷ್ಣೇಗೌಡ, ಚೆನ್ನಪ್ಪ ಮುಂತಾದವರರಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post