ಶಿಕಾರಿಪುರ: ರಾಜ್ಯದಲ್ಲಿ ಲೋಕಸಭಾ ಬಿಜೆಪಿಗೆ 22 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಬಹುಶಃ ತುಮಕೂರು ಕ್ಷೇತ್ರವನ್ನು ನಾವು ಗೆದ್ದರೆ ಯಾವುದೇ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಕ್ಷೇತ್ರವನ್ನು ನಾವು ಗೆದ್ದರೆ ಯಾವುದೇ ಆಶ್ಚರ್ಯವಿಲ್ಲ ಕಲಬುರ್ಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಗೆಲುವು ಸಾಧಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು 24 ಗಂಟೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ರಾಜ್ಯ ಸರ್ಕಾರ ಮೈತ್ರಿ ಪಕ್ಷಗಳ ನಡುವೆ ಲೋಕಸಭಾ ಚುನಾವಣೆ ವಿಚಾರದಲ್ಲಿ ಅವರ ಅವರ ನಡುವೆಯೇ ಗೊಂದಲ ಉಂಟಾಗಿದೆ ಲೋಕಸಭಾ ಚುನಾವಣಾ ಸೋಲಿನ ನಂತರ ಎರಡು ಪಕ್ಷಗಳು ವಿಶ್ವಾಸವನ್ನು ಕಳೆದುಕೊಂಡು ಮೈತ್ರಿಯ ಮಹಾಘಟಬಂಧನ್ ಕೊಂಡಿ ಕಳಚಿಕೊಳ್ಳುತ್ತದೆ ಎಂದರು.
ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ನಡೆಸಿ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ನಡೆಸಿದ್ದು ನಮ್ಮ ಜಿಲ್ಲೆಗೆ ಸಮಯ ಕೊಡಲಾಗುತ್ತಿಲ್ಲ. ಆದ್ದರಿಂದ ಕಾರ್ಯಕರ್ತರು ಶ್ರಮವಹಿಸಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಪುತ್ರನ್ನು ಗೆಲ್ಲಿಸುವಂತೆ ಕರೆ ನೀಡಿದರು.
ಇಡೀ ದೇಶವೇ ಮೋದಿ ಅವರ ಆಡಳಿತವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ನೀವು ಕೂಡ ಬಿ.ಎಸ್. ಯಡಿಯೂರಪ್ಪ ಅಥವಾ ಯಾವುದೇ ಅಭ್ಯರ್ಥಿಯನ್ನು ನೋಡದೆ ಮೋದಿಜೀ ಅವರ ಗೆಲುವಿಗೆ ಎಲ್ಲರೂ ಬಿಜೆಪಿಗೆ ಮತ ನೀಡಿ ಮೋದಿಜೀ ಗೆಲುವಿಗೆ ಶ್ರಮಿಸಬೇಕು ಎಂದರು.
Discussion about this post