ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಾರಿಯ ಚುನಾವಣೆಗೆ ಟಿಕೇಟ್ ವಂಚನೆಗೊಂಡು ಅಸಮಾಧಾನಗೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೈಕಮಾಂಡ್ ಮಾತುಕತೆಯಿಂದ ಸಮಾಧಾನಗೊಂಡಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನು ಕರೆಯಿಸಿಕೊಂಡ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗಿನ ಸಭೆಯ ನಂತರ ಮಾತನಾಡಿದ ಅವರು, ಇಂದಿನ ಸಭೆಯಿಂದ ನನಗೆ ಸಮಾಧಾನವಾಗಿದೆ. ನಡ್ಡಾ ಜೊತೆಗೆ ನನ್ನ ಭಾವನೆ ಹಂಚಿಕೊಂಡಿದ್ದೇನೆ. ನಾನು ಎಲ್ಲಿಯೂ ಸಹ ಕೋಪ ಮಾಡಿಕೊಂಡಿಲ್ಲ ಎಂದಿದ್ದಾರೆ.

ಇನ್ನು ಟಿಕೇಟ್ ವಂಚಿತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದು, ಪಕ್ಷ ತೊರೆಯದಂತೆ ಮನವೊಲಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post