No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರಿಗೆ ಜಗದ್ಗುರು ವಿಧುಶೇಖರ ಶ್ರೀಗಳ ಭೇಟಿ | ಒಂದು ವಾರ ಏನೆಲ್ಲಾ ಕಾರ್ಯಕ್ರಮಗಳಿವೆ? ಇಲ್ಲಿದೆ ವಿವರ

ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ | ಸಾಂಸ್ಕೃತಿಕ ನಗರಿಯಲ್ಲಿ ಮಾರ್ಚ್ 30ರಿಂದ ಏಪ್ರಿಲ್ 6 ರವರೆಗೆ ಅಧ್ಯಾತ್ಮಿಕ ವೈಭವ

kalpa News by kalpa News
March 27, 2024
in ಮೈಸೂರು
0
ಮೈಸೂರಿಗೆ ಜಗದ್ಗುರು ವಿಧುಶೇಖರ ಶ್ರೀಗಳ ಭೇಟಿ | ಒಂದು ವಾರ ಏನೆಲ್ಲಾ ಕಾರ್ಯಕ್ರಮಗಳಿವೆ? ಇಲ್ಲಿದೆ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರಿನ #Mysore ಅಗ್ರಹಾರದ ಫೋರ್ಟ್ ಮೊಹಲ್ಲಾದಲ್ಲಿರುವ ‘ಅಭಿನವ ಶಂಕರಾಲಯ’ದ ಶತಮಾನೋತ್ಸವ ಸಂಭ್ರಮಾಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ಶ್ರೀ ಶೃಂಗೇರಿ ಶಂಕರ ಮಠ #SringeriShankarMutt ಆಯೋಜಿಸಿರುವ ಒಂದು ವಾರದ ಕಾರ್ಯಕ್ರಮಕ್ಕೆ (ಮಾ. 30ರಿಂದ ಏಪ್ರಿಲ್ 6) ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.

ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ಮಾ. 30ರಂದು ಶತಮಾನೋತ್ಸವ ಸಪ್ತಾಹ ವಿಧ್ಯುಕ್ತ ಚಾಲನೆ ಪಡೆಯಲಿದೆ. ಅಂದು ಬೆಳಗ್ಗೆ ಮಠದ ಆವರಣದಲ್ಲಿ ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ಮಠದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಗಣಪತಿ ಹೋಮ ಸಂಪನ್ನಗೊಳ್ಳಲಿದೆ.

ಶೃಂಗೇರಿಯ ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಯವರು 30ರ ಸಂಜೆ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ಪ್ರವೇಶ ಮಾಡಲಿದ್ದಾರೆ. ಸಂಜೆ 6ಕ್ಕೆ ನಗರದ ಸ್ಕೌಟ್ ಭವನದ ಸಮೀಪ ಅವರನ್ನು ಪೂರ್ಣಕುಂಭ ಸಮೇತ ಮಂಗಳವಾದ್ಯಗಳೊಂದಿಗೆ ಸ್ವಾಗತಿಸಲಾಗುವುದು.

ಅಲ್ಲಿಂದ ಶ್ರೀ ಶಂಕರ ಮಠದವರೆಗೆ (ರಾಮಸ್ವಾಮಿ ಸರ್ಕಲ್, ಚಾಮರಾಜ ಜೋಡಿ ರಸ್ತೆ ಮೂಲಕ) ಅವರನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಗುವುದು. ಸಂಜೆ 7ಕ್ಕೆ ಜಗದ್ಗುರುಗಳು ಮಠದ ಆವರಣದಲ್ಲಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಲಿದ್ದಾರೆ. ರಾತ್ರಿ 7:30ಕ್ಕೆ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಲಿದ್ದಾರೆ.
ಶತಚಂಡಿ ಪಾರಾಯಣ
ಮಾ. 31ರಂದು ಮಠದ ಆವರಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣ ನೆರವೇರಲಿ. ಈ ಸಂದರ್ಭ ಶ್ರೀ ಜಗದ್ಗುರುಗಳು ಸಾರ್ವಜನಿಕ ದರ್ಶನ ನೀಡಲಿದ್ದು, ಪಾದಪೂಜೆ ಮತ್ತು ಭಿಕ್ಷಾವಂದನೆ ನಡೆಯಲಿದೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಅವರು ಭೇಟಿ ನೀಡಲಿದ್ದಾರೆ. ರಾತ್ರಿ 8.30ಕ್ಕೆ ಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಲಿದ್ದಾರೆ.

Also read: ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ನಂಜನಗೂಡಿಗೆ ಭೇಟಿ
ಏ. 1ರಂದು ಬೆಳಗ್ಗೆ 8ಕ್ಕೆ ಶ್ರೀ ಜಗದ್ಗುರುಗಳು ನಂಜನಗೂಡಿನ #Nanjanaguru ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ರಾತ್ರಿ 8.30ಕ್ಕೆ ಮೈಸೂರಿನ ಶಂಕರ ಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನಡೆಸಲಿದ್ದಾರೆ. ಏ. 2ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನ, ಪಾದಪೂಜೆ ಹಾಗೂ ಭಿಕ್ಷಾ ವಂದನೆ ನಡೆಯಲಿದೆ. ಸಂಜೆ 4:30ಕ್ಕೆ ನಗರದ ವಿವಿಧ ದೇವಾಲಯಗಳು ಹಾಗೂ ಸಂಘ-ಸಂಸ್ಥೆಗಳಿಗೆ ಜಗದ್ಗುರುಗಳು ಭೇಟಿ ನೀಡಲಿದ್ದಾರೆ.
ವಿಶ್ವೇಶ್ವರ ದೇವಸ್ಥಾನದಲ್ಲಿ ಕುಂಭಾಭಿಷೇಕ
ಏ. 3ರ ಬೆಳಗ್ಗೆ 9ಕ್ಕೆ ನಗರದ ಗೀತಾ ರಸ್ತೆಯ ಶ್ರೀ ಪ್ರಸನ್ನ ವಿಶ್ವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಗೊಂಡಿರುವ ಕುಂಭಾಭಿಷೇಕದ ಸಾನ್ನಿಧ್ಯವನ್ನು ಶ್ರೀ ಜಗದ್ಗುರುಗಳು ವಹಿಸಲಿದ್ದಾರೆ. ಪಾದಪೂಜೆ ಮತ್ತು ಭಿಕ್ಷಾವಂದನೆಯನ್ನು ಜಗದ್ಗುರುಗಳು ಸ್ವೀಕರಿಸಲಿರುವುದು ವಿಶೇಷ. ಸಂಜೆ 4.30 ರಿಂದ 7 ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಪೂಜ್ಯರು ಭೇಟಿ ನೀಡಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.

ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ
ಏ. 4 ರ ಬೆಳಗ್ಗೆ 8.30 ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ #Shankaramutt ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ ಮತ್ತು ಶ್ರೀ ಶಂಕರಾಚಾರ್ಯರ ಸನ್ನಿಧಿಗಳಲ್ಲಿ ಕುಂಭಾಭಿಷೇಕ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ನೆರವೇರಲಿದೆ. ಶ್ರೀ ವಿಧುಶೇಖರ ಭಾರತೀ ತೀರ್ಥ ಜಗದ್ಗುರುಗಳು ಸಾರ್ವಜನಿಕ ದರ್ಶನ, ಪಾದಪೂಜೆ ಮತ್ತು ಭಿಕ್ಷಾವಂದನೆ ಸಾನ್ನಿಧ್ಯ ವಹಿಸಿ ಭಕ್ತ ವೃಂದವನ್ನು ಆಶೀರ್ವದಿಸಲಿದ್ದಾರೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಮರ್ಪಿಸಲಿದ್ದಾರೆ.

5 ರಂದು ಗುರುವಂದನಾ ಕಾರ್ಯಕ್ರಮ
ಏ. 5ರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1 ರ ವರೆಗೆ ಶಂಕರ ಮಠದ ಆವರಣದಲ್ಲಿ ಶ್ರೀ ಶಾರದಾಂಬಾ ಹಾಗೂ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ಕುಂಭಾಭಿಷೇಕ ಮತ್ತು ಶಿಖರ ಕುಂಭಾಭಿಷೇಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಲಿವೆ. ಸಂಜೆ 5.30ಕ್ಕೆ ಮಠದ ಆವರಣದ ವಿದ್ಯಾಶಂಕರ ನಿಲಯ ಕಲ್ಯಾಣ ಮಂಟಪದಲ್ಲಿ ‘ಗುರುವಂದನಾ’ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಆಗಮಿಸಲಿದ್ದಾರೆ. ವಿವಿಧ ಸಂಘ ಸಂಸ್ಥೆ ಪ್ರಮುಖರು, ನಗರದ ಗಣ್ಯರು, ಸಾರ್ವಜನಿಕರು ಮತ್ತು ಮಠದ ಭಕ್ತರು ಸಾಕ್ಷಿಯಾಗಲಿದ್ದಾರೆ.

ಮಂತ್ರಾಕ್ಷತೆ ಅನುಗ್ರಹ
ಏ. 6ರ ಬೆಳಗ್ಗೆ 9ಕ್ಕೆ ಪೂಜ್ಯ ಜಗದ್ಗುರುಗಳು ಸಾರ್ವಜನಿಕ ದರ್ಶನ ನೀಡಿ, ಪಾದಪೂಜೆ ಮತ್ತು ಭಿಕ್ಷಾ ವಂದನೆ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭ ಅವರು ಶಿಷ್ಯರಿಗೆ, ಭಕ್ತರಿಗೆ ಫಲ ಮಂತ್ರಾಕ್ಷತೆಯನ್ನು ಅನುಗ್ರಹಿಸಲಿದ್ದಾರೆ ಎಂದು ಅಭಿನವ ಶಂಕರಾಲಯದ ಧರ್ಮಾಧಿಕಾರಿ ಎಚ್. ರಾಮಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

Tags: Kannada News WebsiteLatest News KannadaLocal NewsMalnad NewsmysoreShankar MuttSringeriSringeri SwamijiVidhushekara Bharathi Swamijiನಂಜನಗೂಡುಶಂಕರ ಮಠಶತಚಂಡಿ ಪಾರಾಯಣಶೃಂಗೇರಿಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಶ್ರೀ ಶಂಕರಾಚಾರ್ಯಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ಇಡಿ ಕೇಸ್ ಫೈಲ್ | ಯಾವ ಕಾರಣಕ್ಕಾಗಿ?

Next Post

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

kalpa News

kalpa News

Next Post
ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!