ಕಲ್ಪ ಮೀಡಿಯಾ ಹೌಸ್ | ಜೈಪುರ |
ಎಲ್’ಪಿಜಿ ಗ್ಯಾಸ್ ಸಿಲಿಂಡರ್ #LPG Gas Cylinder ತುಂಬಿದ್ದ ಟ್ರಕ್’ಗೆ ಟ್ಯಾಂಕರೊಂದು ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಏಳು ವಾಹನಗಳು ಸುಟ್ಟು ಭಸ್ಮವಾದ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ.
ಹೇಗಾಯ್ತು ಘಟನೆ?
ಸಿಲಿಂಡರ್ ಟ್ರಕ್ ಚಾಲಕ ವಾಹನವನ್ನು ರಸ್ತೆ ಬದಿ ನಿಲ್ಲಿಸಿ, ಊಟಕ್ಕೆಂದು ಹೊಟೇಲ್’ಗೆ ಹೋಗಿದ್ದ. ಈ ಸಂದರ್ಭದಲ್ಲಿ ಟ್ಯಾಂಕರೊಂದು ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ್ದ ಟ್ರಕ್’ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಸಿಲಿಂಡರ್ ತುಂಬಿದ್ದ ಟ್ಯಾಂಕರ್’ಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಟ್ರಕ್’ನಲ್ಲಿದ್ದ ಸಿಲಿಂಡರ್ ಒಂದರ ನಂತರ ಒಂದರಂತೆ ಸರಣಿಯಾಗಿ ಸ್ಪೋಟಗೊಂಡಿದೆ.
ಸಿಲಿಂಡರ್ ಸ್ಫೋಟದ ಸದ್ದು ಒಂದು ಕಿಲೋಮೀಟರ್ ಉದ್ದಕ್ಕೂ ಕೇಳಿಸಿದ್ದು, ಬೆಂಕಿಯ ಜ್ವಾಲೆಯು ಹತ್ತು ಕಿಮೀ ದೂರಕ್ಕೂ ಕಾಣಿಸಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post