ಕಲ್ಪ ಮೀಡಿಯಾ ಹೌಸ್ | ಜೈಪುರ್ |
ರಾಜಸ್ಥಾನದ ಹನುಮಾನ್‍ಗಢದಲ್ಲಿ ಭಾರತೀಯ ವಾಯುಸೇನೆಯ ಮಿಗ್-21 Mig-21 ಯುದ್ಧ ವಿಮಾನ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಪೈಲಟ್ ಮತ್ತು ಸಹ ಪೈಲಟ್ ಸಕಾಲದಲ್ಲಿ ವಿಮಾನದಿಂದ ಜಿಗಿದು, ಪ್ಯಾರಾಚೂಟ್ ಸಹಾಯದಿಂದ ಸುರಕ್ಷಿತವಾಗಿ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ವಿಮಾನ ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೂರತ್‍ಗಢದಿಂದ ವಿಮಾನ ಟೇಕಾಫ್ ಆದ ಸ್ವಲ್ಪ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದೆ. ವಿಮಾನ ಪತನಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Also read: ಎಸ್’ಎಸ್’ಎಲ್’ಸಿ ಫಲಿತಾಂಶ: 625 ಅಂಕ ಗಳಿಸಿದ ರಾಜ್ಯದ ನಾಲ್ವರು ವಿದ್ಯಾರ್ಥಿಗಳು ಯಾರು?



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















