ಕಲ್ಪ ಮೀಡಿಯಾ ಹೌಸ್ | ಜೈಪುರ |
ಇಲ್ಲಿನ ಸರ್ಕಾರಿ ಸ್ವಾಮ್ಯದಲ್ಲಿರುವ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಟ್ರಾಮಾ ಸೆಂಟರ್’ನಲ್ಲಿ ನಿನ್ನೆ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಆರು ರೋಗಿಗಳು ದಾರುಣವಾಗಿ ಸಾವಿಗೀಡಾಗಿದ್ದಾರೆ.
ನ್ಯೂರೋ ಐಸಿಯುನಲ್ಲಿ 11 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಸ್ಟೋರೇಜ್’ನಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ #Short circuit ಅಗ್ನಿ ಅನಾಹುತಕ್ಕೆ ಕಾರಣ ಇರಬಹುದು ಎಂದು ಹೇಳಲಾಗಿದೆ.

ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಇತರ ಹದಿನಾಲ್ಕು ರೋಗಿಗಳನ್ನು ಬೇರೆ ಐಸಿಯುಗೆ ದಾಖಲಿಸಲಾಗಿದ್ದು, ಎಲ್ಲರನ್ನೂ ಸುರಕ್ಷಿತ ಸ್ಥಳಗಳಿಗೆ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಆ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ದಾಖಲೆಗಳು, ಐಸಿಯು ಉಪಕರಣಗಳು, ರಕ್ತದ ಮಾದರಿ ಟ್ಯೂಬ್’ಗಳು ಮತ್ತು ಇತರ ವಸ್ತುಗಳು ಸುಟ್ಟುಹೋಗಿವೆ. ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿ ಸಹಾಯಕರು ರೋಗಿಗಳನ್ನು ಸ್ಥಳಾಂತರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post