ಕಲ್ಪ ಮೀಡಿಯಾ ಹೌಸ್ | ಜಮಖಂಡಿ |
ಬಿಜೆಪಿಯಲ್ಲಿ ಕುಟುಂಬ ರಾಜಕಾರಣ, ವಂಶಪರಂಪರೆ ಆಡಳಿತ ಇರಬಾರದು. ಆದರೆ, ಅದನ್ನೇ ಮುಂದುವರಿಸಲಾಗುತ್ತಿದೆ. ಇದರಿಂದ ಅನೇಕರಿಗೆ ನೋವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಕಿಡಿ ಕಾರಿದರು.
ನಗರದ ನಿರೀಕ್ಷಣಾ ಮಂದಿರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಕುಟುಂಬ ರಾಜಕಾರಣ, ವಂಶಪರಂಪರೆ ಆಡಳಿತ ಇರಬಾರದು. ಆದರೆ, ಅದನ್ನೇ ಮುಂದುವರಿಸಲಾಗುತ್ತಿದೆ. ಇದರಿಂದ ಅನೇಕರಿಗೆ ನೋವಾಗಿದೆ. ಪಕ್ಷ, ಹಿಂದುತ್ವ ಉಳಿಯಬೇಕು ಎಂದು ಹೋರಾಟ ಮಾಡುತ್ತ ಬಂದಿದೆ. ಆದರೆ, ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದ್ದು, ಅದಕ್ಕೆ ವಿರೋಧ ವ್ಯಕ್ತವಾಗಿದೆ ಎಂದರು.
ಪಕ್ಷಕ್ಕಾಗಿ ದುಡಿದ ಹಲವು ಹಿರಿಯ ಮುಖಂಡರು ರಾಜ್ಯದಲ್ಲಿನ ಬಿಜೆಪಿ #BJP ಪರಿಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಬಣಗಳ ಗೊಂದಲ ಸೇರಿದಂತೆ ಎಲ್ಲದಕ್ಕೂ ಹೈಕಮಾಂಡ್ ತಾರ್ಕಿಕ ಅಂತ್ಯ ಹಾಡಲಿದೆ ಎಂಬ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.
Also read: ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಬಳಕೆ | ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಬಿಜೆಪಿ ಶುದ್ಧಿಕರಣಕಾಲ ಸನ್ನಿಹಿತವಾಗಿದೆ. ಪಕ್ಷ ಶುದ್ಧಗೊಳಿಸಲಾಗುತ್ತದೆ. ಎಲ್ಲರಿಗೂ ಬುದ್ಧಿ ಬರುತ್ತದೆ. ರಾಜ್ಯದಲ್ಲಿ ಬಿಜೆಪಿಯ ಸಮಸ್ಯೆ ಏನು ಎಂಬುದನ್ನು ಹೈಕಮಾಂಡ್ ಚೆನ್ನಾಗಿ ಅರ್ಥ ಮಾಡಿಕೊಂಡಿದೆ, ಇನ್ನು ಕೆಲವೇ ದಿನಗಳಲ್ಲಿ ಪಕ್ಷದ ವರಿಷ್ಟರು ದಿಟ್ಟ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯ ಬಣ ಬಡಿದಾಟದಿಂದ ಪಕ್ಷ ಕಟ್ಟಿದ ಎಲ್ಲ ಹಿರಿಯರಿಗೆ ನೋವಾಗಿದೆ.
ರಾಜ್ಯದ 9 ವಿಶ್ವವಿದ್ಯಾಲಯ ರದ್ದುಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ವಿವಿಗಳಿಗೆ ಬೇಕಾದ ಅನುದಾನ ಬಿಡುಗಡೆ ಗೊಳಿಸಬೇಕು ಎಂದು ಆಗ್ರಹಿಸಿದ ಅವರು, ರಾಜ್ಯ ಸರ್ಕಾರ ಅವೈಜ್ಞಾನಿಕ ಕ್ರಮ ಕೈಗೊಳ್ಳಬಾರದು. ಬದಲಿಗೆ ತಜ್ಞರಿಂದ ತನಿಖೆ ನಡೆಸಿ ವರದಿ ತರಿಸಿಕೊಂಡು ಕ್ರಮ ಜರುಗಿಸಬೇಕು, ಬಡ ಮಕ್ಕಳ ಶಿಕ್ಷಣದ ಹಕ್ಕು ಕಸಿಯುವ ಕೆಲಸ ಮಾಡಬಾರದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post