ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಜಾಮಿಯಾ ವಿವಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾರೂ ವಿದ್ಯಾರ್ಥಿಗಳೇ ಅಲ್ಲ ಎಂಬ ವಿಚಾರದ ಬೆಳಕಿಗೆ ಬಂದಿದೆ.
ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದರು. ಇವರನ್ನೆಲ್ಲಾ ವಿಚಾರಣೆ ನಡೆಸಿದ ನಂತರ ಇವರು ಯಾರೂ ವಿದ್ಯಾರ್ಥಿಗಳೇ ಅಲ್ಲ. ಅಲ್ಲದೇ, ಕ್ರಿಮಿನಲ್ ಹಿನ್ನೆಲೆಯುಳ್ಳವರು ಎಂಬ ಮಾಹಿತಿ ಪೊಲೀಸ್ ಇಲಾಖೆಯಿಂದ ಹೊರಬಿದ್ದಿದೆ.
ವಿವಾದಾತ್ಮಕ ನೂತನ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಭಾನುವಾರ ಸಂಜೆ ಜಾಮಿಯಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿ ನಾಲ್ಕು ಬಸ್, ಟ್ರಕ್’ವೊಂದಕ್ಕೆ ಬೆಂಕಿ ಹಚ್ಚಲಾಗಿತ್ತು.
ಅನುಮತಿ ಪಡೆಯದೆ ವಿಶ್ವವಿದ್ಯಾಲಯ ಆವರಣ ಪ್ರವೇಶಿಸಿದ ಪೊಲೀಸರು 100 ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ನಂತರ ಜಾಮಿಯಾ, ದೆಹಲಿ ವಿಶ್ವವಿದ್ಯಾಲಯ ಹಾಗೂ ಜೆಎನ್’ಯು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ದೆಹಲಿ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ನಂತರ ಸೋಮವಾರ ಮಧ್ಯಾಹ್ನ ಬಂಧಿಸಲಾಗಿದ್ದ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿತ್ತು.
ಇನ್ನು, ಬಂಧಿತರಾಗಿರುವ ಯಾರಿಗೂ ಕ್ಲೀನ್ ಚಿಟ್ ನೀಡಲ್ಲ ಎಂಬುದನ್ನು ಪೊಲೀಸರು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
Get in Touch With Us info@kalpa.news Whatsapp: 9481252093















