ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶ್ರೀನಗರದ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಸಂಜೆ ಪಂಥಾ ಚೌಕ್ ಬಳಿಯಲ್ಲಿ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿ, 12 ಪೊಲೀಸ್ ಸಿಬ್ಬಂದಿಗಳಿಗೆ ಗಾಯವಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಾಗದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಇಡಿಯ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದಾರೆ. ಉಗ್ರ ಶೋಧಕಾರ್ಯ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post