No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜ.2-5 | ‘ಸೇವಾ ಸದನ’ದಲ್ಲಿ ಸಾಂಸ್ಕೃತಿಕ ರಸದೌತಣ | ನಿರಂತರಂ-ರಾಷ್ಟ್ರೀಯ ಸಂಗೀತ, ನೃತ್ಯ ಮಹೋತ್ಸವ

ವಿದುಷಿ ಪುಸ್ತಕಂ ರಮಾ ಅವರಿಂದ ಆಯೋಜನೆ | ‘ಸಂಗೀತ ಸಂಭ್ರಮ’ ಸಂಸ್ಥೆ ಪ್ರಸ್ತುತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2024
in Special Articles, ಬೆಂಗಳೂರು ನಗರ
0
ಜ.2-5 | ‘ಸೇವಾ ಸದನ’ದಲ್ಲಿ ಸಾಂಸ್ಕೃತಿಕ ರಸದೌತಣ | ನಿರಂತರಂ-ರಾಷ್ಟ್ರೀಯ ಸಂಗೀತ, ನೃತ್ಯ ಮಹೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ಬರಹ: ಶಿವಮೊಗ್ಗ ರಾಂ  |

ಉದ್ಯಾನ ನಗರಿಯ ಪ್ರತಿಷ್ಠಿತ ‘ಸಂಗೀತ ಸಂಭ್ರಮ’ – ಇನ್‌ಸ್ಟಿಟ್ಯೂಷನ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ #InstitutionofMusicandDance ಸಂಸ್ಥೆ ಜನವರಿ 2ರಿಂದ 5ರವರೆಗೆ ಮಲ್ಲೇಶ್ವರ ಬಡಾವಣೆ 14ನೇ ಕ್ರಾಸ್‌ನ ‘ಸೇವಾ ಸದನ’ ದಲ್ಲಿ 14ನೇ ವರ್ಷದ ನಿರಂತರಂ-ರಾಷ್ಟ್ರೀಯ ಸಂಗೀತ ಮತ್ತು ನೃತ್ಯ ಮಹೋತ್ಸವ ಹಮ್ಮಿಕೊಂಡಿದೆ.

ಬೆಂಗಳೂರು ಸೇರಿದಂತೆ ದೇಶ-ವಿದೇಶದ ಸಂಗೀತ-ನೃತ್ಯ ವಿದ್ವಾಂಸರು, ಪರಿಣತರು, ವಿವಿಧ ರಂಗದ ಸಾಧಕರು ಮತ್ತು ಉದಯೋನ್ಮುಖ ಪ್ರತಿಭೆಗಳು ಈ ಮಹೋತ್ಸವದಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಶಿವರಾಂ ಅವರಿಂದ ಚಾಲನೆ
ಜ. 2ರ ಸಂಜೆ 5ಕ್ಕೆ ನಿವೃತ್ತ ಸಹಾಯಕ ಪೊಲೀಸ್ ಕಮಿಷನರ್ ಬಿ.ಕೆ. ಶಿವರಾಂ ‘ನಿರಂತರಂ’ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ, ನಿರಂತರಂ ಉತ್ಸವದ ಮುಖ್ಯ ರೂವಾರಿ ಹಾಗೂ ಸಂಗೀತ ಸಂಭ್ರಮ ಸಂಸ್ಥೆ ನಿರ್ದೇಶಕಿ- ವಿದುಷಿ ಪುಸ್ತಕಂ ರಮಾ ಸಾಕ್ಷಿಯಾಗಲಿದ್ದಾರೆ. ಸಂಗೀತ ಸಂಭ್ರಮ ತಂಡದ ಕಲಾವಿದರ ಭಕ್ತಿ ಸಂಗೀತ ಗಾಯನವು ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ಉದಯೋನ್ಮುಖ ಪ್ರತಿಭೆಗಳಾದ ಕಿರಣ್ ಜೋಶ್ಯರ್-ನಂದನ್ ಜೋಶ್ಯರ್ ದ್ವಂದ್ವ ಗಾಯನದ ನಂತರ ಖ್ಯಾತ ಕಲಾವಿದೆ ಅಂಜಲಿ ಶ್ರೀರಾಮ್ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಪ್ರಸ್ತುತ ಪಡಿಸಲಿದ್ದಾರೆ.

ನಾಟ್ಯಾಲಯ ಸ್ಕೂಲ್ ಆಫ್ ಡಾನ್ಸ್ ಕಲಾವಿದರಿಂದ ‘ನೃತ್ಯ ಪ್ರವೇಶಂ’ ವಿಶೇಷ ರೂಪಕ ರಂಜಿಸಲಿದೆ. (ನಿರ್ದೇಶನ ಗುರು ವಿನಿತಾ)

ಭರತನಾಟ್ಯ ಪ್ರಸ್ತುತಿ
ಕಲಾಸ್ನೇಹಿ ನರ್ತನ ಯೋಗ ಸಂಸ್ಥೆ ನಿರ್ದೇಶಕ ವಿದ್ವಾನ್ ಯೋಗೇಶ ಕುಮಾರ್- ಸ್ನೇಹಾ ನಾರಾಯಣರ ದ್ವಂದ್ವ ಭರತನಾಟ್ಯ ನಂತರ ಲಲಿತಾ ಕಲಾ ನಿಕೇತನ ತಂಡದಿಂದ ಭರತನಾಟ್ಯ ಪ್ರೇಕ್ಷಕರನ್ನು ರಂಜಿಸಲಿದೆ.

Also Read>> ಗಮನಿಸಿ! ಜ.1ರ ನಾಳೆಯಿಂದ ಶಿವಮೊಗ್ಗದ ಈ ರೈಲುಗಳ ಸಂಚಾರ ಸಮಯದಲ್ಲಿ ಬದಲಾಗಲಿದೆ

ಜ.3ರಂದು ಸಂಜೆ 5ಕ್ಕೆ (ಮಂಡಾಯಂ ಅಜಿ ಕೃಷ್ಣಕುಮಾರ್ ಸ್ಮರಣಾ) ಕಾರ್ಯಕ್ರಮಕ್ಕೆ ಹಿರಿಯ ರಂಗಕರ್ಮಿ ಶ್ರೀನಿವಾಸ ಕಪ್ಪಣ್ಣ, ಅನನ್ಯ ಸಂಸ್ಥೆ ವ್ಯವಸ್ಥಾಪಕ ಟ್ರಸ್ಟಿ ಆರ್.ವಿ. ರಾಘವೇಂದ್ರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಗೀತ ಸಂಭ್ರಮ – ತಂಡದಿಂದ ಭಕ್ತಿ ಸಂಗೀತ, ನಂತರ ಪೂರ್ವಿ ಸಂಗೀತ ಅಕಾಡೆಮಿ ಕಲಾವಿದ ರಿಂದ ಗಾಯನವಿದೆ. ನಂತರ ವಿದುಷಿ ಲಾವಣ್ಯಾ ಕೃಷ್ಣಮೂರ್ತಿ ತಂಡದಿಂದ ಪ್ರಮುಖ ಕಚೇರಿ ಸಂಪನ್ನಗೊಳ್ಳಲಿದೆ. ಭರತನಾಟ್ಯ ಸರಣಿಯಲ್ಲಿ ಅಮೆರಿಕದ ಡಲ್ಲಾಸ್‌ನ ಶಶಾಂಕ ಈಶ್ವರ್, ಆಸ್ಟಿನ್‌ನ ಅಕ್ಷೈನಿ ಕಮ್ಮ ಹಾಗೂ ಚಿಕಾಗೋನ ಅದಿತಿ ರಾಂ ನರ್ತನ ಪ್ರೌಢಿಮೆ ಅನಾವರಣಗೊಳ್ಳಲಿದೆ.

ಜ.4ರಂದು ದಿನಪೂರ್ಣ ಸಂಗೀತ-ನೃತ್ಯ ಸಮಾರಾಧನೆ ನೆರವೇರಲಿದೆ. ಬೆಳಗ್ಗೆ 10ಕ್ಕೆ ನಾಟ್ಯಾಲಯ ಸ್ಕೂಲ್ ಆಫ್ ಡಾನ್ಸ್ ( ಆಸ್ಟಿನ್) ನೃತ್ಯಗುರು ವಿನಿತಾ ಸುಬ್ರಮಣಿಯನ್ ದೀಪ ಬೆಳಗಲಿದ್ದಾರೆ. ನರ್ತನ ಸರಣಿಯಲ್ಲಿ ಕುಮಾರಿ ಸ್ವರಾ ಕೃಷ್ಣರಾವ್- ಅಕ್ಷಾ ಶ್ರೀವತ್ಸಂ- ರಾವಳಿ ಮೈಲಾವರಪು, ಸ್ನೇಹಾ ಭಾಗವತ್ ಅವರ ಭರತನಾಟ್ಯ ಮನಕ್ಕೆ ಮುದ ನೀಡಲಿದೆ.ರಾಮಪ್ರಿಯ ತುಳಸಿದಾಸ ರೂಪಕ
ಎಂ.ಎಸ್. ನಾಟ್ಯ ಕ್ಷೇತ್ರದ ಗುರು ಕೌಸಲ್ಯಾ ನಿವಾಸ್ ತಂಡದಿಂದ ರಾಮಪ್ರಿಯ ತುಳಸಿದಾಸ – ವಿಶೇಷ ನೃತ್ಯರೂಪ ಪಡಮೂಡಲಿದೆ. ಸಂಜೆ 6ಕ್ಕೆ ಸಾಂಸ್ಕೃತಿಕ ಸಮಾರಂಭವನ್ನು ವಿದುಷಿ ರೇವತಿ ಕಾಮತ್ ಉದ್ಘಾಟಿಸಲಿದ್ದಾರೆ. ಡಾ. ರಾಜಕುಮಾರ್ ನೇತ್ರ ಬ್ಯಾಂಕ್ ನಿರ್ದೇಶಕ ಡಾ. ಎಂ. ಕೆ. ಕೃಷ್ಣ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಎಂದರೋ ಮಹಾನುಭಾವುಲು…
ವಿಶ್ವ ಸಂಗೀತ ವಾಗ್ಗೇಯಕಾರರಿಗೆ ಮತ್ತು ಸಂಯೋಜಕರಿಗೆ ವಿಶೇಷ ನಮನ ಸಲ್ಲಿಸುವ ದಿಸೆಯಲ್ಲಿ ಸಿದ್ಧಪಡಿಸಿರುವ ‘ ಎಂದರೋ ಮಹಾನುಭಾವುಲು’ ಪ್ರೇಕ್ಷಕರ ಮನದಂಗಳದಲ್ಲಿ ಹೊಸ ಪಲ್ಲವಗಳನ್ನೇ ಸೃಷ್ಟಿಮಾಡಲಿದೆ. ಹಿರಿಯ ವೇಣುವಾದಕ ರಘುನಂದನ ರಾಮಕೃಷ್ಣ ಅವರ ಪರಿಕಲ್ಪನೆಯಲ್ಲಿ ಮೂಡಿ ಬರಲಿರುವ ಪ್ತಸ್ತುತಿಗೆ ಸುಪ್ರಿಯಾ ರಘುನಂದನ, ದೀಪ್ತಿ ಶ್ರೀನಾಥ ಮತ್ತು ಸುರಾಘವಿ ತಂಡದ ಕಲಾವಿದರು ಕೊರಳಾಗಲಿದ್ದಾರೆ.

ನಿರಂತರಂ ರಾಷ್ಟ್ರೀಯ ಸಂಗೀತ ಮತ್ತು ನೃತ್ಯ ಹಬ್ಬ – 14ನೇ ವರ್ಷಾಚರಣೆಯಲ್ಲಿ ದೇಶ -ವಿದೇಶದ ವಿದ್ವನ್ಮಣಿಗಳು ಸಂಗಮ ಗೊಳ್ಳಲಿದ್ದಾರೆ. ಹಿರಿಯ ವಿದ್ವಾಂಸರಿಗೆ ಗೌರವ, ನುರಿತ ಕಲಾವಿದರಿಗೆ ಕಚೇರಿ, ಅರಳು ಪ್ರತಿಭೆಗಳಿಗೆ ವೇದಿಕೆ ಮತ್ತು ಕಲಾರಸಿಕರಿಗೆ ರಸದೌತಣ ದೊರಕಿಸಿಕೊಡಲಿದೆ. ಸಾಗರದಾಚೆಯ ಕಲಾವಿದರು ಈ ಉತ್ಸವದಲ್ಲಿ ಪಾಂಡಿತ್ಯವನ್ನು ಒರೆಗೆ ಹಚ್ಚಲಿದ್ದಾರೆ. ಎಲ್ಲದಕ್ಕೂ ಶ್ರೀ ನಾರಾಯಣ ರಾಮಾಜುನ ಜೀಯರ್ ವಿಶೇಷ ಕೃಪೆ, ಅನುಗ್ರಹ ನಿರಂತರವಾಗಿರುವುದೇ ನಮಗೆ ಶಕ್ತಿ.
-ಪುಸ್ತಕಂ ರಮಾ, ಹಿರಿಯ ವಿದುಷಿ

ಜ. 5ರ ಸಂಜೆ 5.30ಕ್ಕೆ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ನಾರಾಯಣ ರಾಮಾನುಜ ಜೀಯುರ್ ಸಾನಿಧ್ಯದಲ್ಲಿ ಉತ್ಸವದ ಪ್ರಮುಖ ಘಟ್ಟ ಕಳೆಗಟ್ಟಲಿದೆ. ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಈ ಟಿವಿ ಮಾಧ್ಯಮ ಸಲಹೆಗಾರ ಪವನ್ ಕುಮಾರ ಮಾನ್ವಿ, ವಿದುಷಿ ನಾಗಮಣಿ ಶೀನಾಥ್ ಹಾಜರಿರುತ್ತಾರೆ. ಇತ್ತೀಚೆಗೆ ನಿಧನರಾದ ವಿದುಷಿ ಮತ್ತು ಆಕಾಶವಾಣಿ ಕಲಾವಿದೆ ಆರ್. ಚಂದ್ರಿಕಾ ಅವರಿಗೆ ವಿಶೇಷ ನಮನ ಸಲ್ಲಿಸಲು ಸಂಗೀತ ಸಂಭ್ರಮ ತಂಡವು ‘ ನಾದ ಚಂದ್ರಿಕಾ’ ಕಾರ್ಯಕ್ರಮ ಸಿದ್ಧಪಡಿಸಿದೆ. ವಿದುಷಿ ಡಾ. ನಾಗಮಣಿ ಶ್ರೀನಾಥ್ ನಿರ್ದೇಶನದ ಈ ಕಾರ್ಯಕ್ರಮದಲ್ಲಿ ಸುನಾದ ಕಲ್ಚರಲ್ ಸೆಂಟರ್ ಕಲಾವಿದರ ಅಭಿನಯ ಮನ ಸೆಳೆಯಲಿದೆ. ಕಲಾಪೋಷಕ ಡಿ.ಎಸ್. ಉಮೇಶ್ ಇದಕ್ಕೆ ಸಾಕ್ಷಿಯಾಗಲಿದ್ದಾರೆ.

14 ಕಲಾವಿದರಿಗೆ ಸಂಭ್ರಮ ಪುರಸ್ಕಾರ
ಹಿರಿಯ ವಿದುಷಿ ಪುಸ್ತಕ ರಮಾ ನೇತೃತ್ವದಲ್ಲಿ 14ನೇ ಸಂಗೀತ ಸಂಭ್ರಮ ಸವಿ ನೆನಪಿಗಾಗಿ ಜ. 5ರ ಸಂಜೆ 7ಕ್ಕೆ ನಾಡಿನ ಪ್ರಖ್ಯಾತ 14 ವಿದ್ವಾಂಸರು- ಕಲಾರಾಧಕರನ್ನು ಗೌರವಿಸಲಾಗುತ್ತಿದೆ. ನೃತ್ಯಗುರು ಲಲಿತಾ ಶ್ರೀನಿವಾಸನ್, ಡಾ.ಟಿ.ಎಸ್. ಸತ್ಯವತಿ, ಗಾಯನ ಸಮಾಜ ಅಧ್ಯಕ್ಷ ಡಾ. ಎಂಆರ್‌ವಿ ಪ್ರಸಾದ್, ಸಿನಿಮಾ ನಿರ್ದೇಶಕ ಟಿ.ಎಸ್. ನಾಗಾಭರಣ, ಡಾ. ಎಂ. ಸೂರ್ಯಪ್ರಸಾದ್, ಕೊಳಲು ವಿದ್ವಾಂಸ ಬಿ.ಕೆ. ಅನಂತ ರಾಮನ್, ಬೆಂಗಳೂರು ಗಣೇಶ ಉತ್ಸವದ ರೂವಾರಿ ಎಂ.ಮರಿಯಪ್ಪ, ಆನೂರು ಅನಂತ ಕೃಷ್ಣ ಶರ್ಮ, ವಾಣಿ ಈಶ್ವರ ಡಲ್ಲಾಸ್, ಸುಧಾ ಶೇಖರ ಅಮೆರಿಕ, ಇಂಗ್ಲೆಂಡಿನ ದೇವಿಕಾ ರಾವ್, ರಂಗ ಕಲಾವಿದೆ – ಲೇಖಕಿ ನಾಗವೇಣಿ ರಂಗನ್ ಅವರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ. ಉತ್ಸವದ ಸಮಗ್ರ ಉಸ್ತುವಾರಿಯನ್ನು ಹಿರಿಯ ವಿದುಷಿಯರಾದ ಪುಸ್ತಕಂ ರಮಾ, ದೀಪ್ತಿ, ಹರಿಣಿ, ಮತ್ತು ಪದ್ಮಿನಿ ನಿರ್ವಹಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limited

Tags: B K ShivarajBENGALURUDance ProgramInstitution of Music and DanceKannada News WebsiteLatest News KannadaMusic ProgramMusical ConcertNatyalaya School of Danceಇನ್‌ಸ್ಟಿಟ್ಯೂಷನ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ನಾಟ್ಯಾಲಯ ಸ್ಕೂಲ್ ಆಫ್ ಡಾನ್ಸ್ನೃತ್ಯ ಮಹೋತ್ಸವಬಿ.ಕೆ. ಶಿವರಾಂಬೆಂಗಳೂರುಸಂಗೀತ ಸಂಭ್ರಮ
Share196Tweet123Send
Previous Post

ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದಲ್ಲಿ ಮಾತ್ರ ಗೌಳಿ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ

Next Post

ಬೆಂಗಳೂರು | ಪೂರ್ಣಪ್ರಜ್ಞ ವಿದ್ಯಾಪೀಠ, ನಂಜನಗೂಡು ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಪೂರ್ಣಪ್ರಜ್ಞ ವಿದ್ಯಾಪೀಠ, ನಂಜನಗೂಡು ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು | ಪೂರ್ಣಪ್ರಜ್ಞ ವಿದ್ಯಾಪೀಠ, ನಂಜನಗೂಡು ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

May 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ನೆಂಟರ ಮದುವೆಗೆ ಹೊರಟು ಬಸ್ ಹತ್ತುತ್ತಿದ್ದ ಮಹಿಳೆ ಬ್ಯಾಗ್ ಕಳ್ಳತನ | ಕಳೆದುಕೊಂಡಿದ್ದು ಚಿನ್ನದ ಮೌಲ್ಯ ಎಷ್ಟು?

May 11, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಪ್ರಧಾನಿ ಮೋದಿಯ ಒಂದೇ ಒಂದು ಮಾತು | ಚಿನ್ನದ ಬೆಲೆಯಲ್ಲಿ ಗಣನೀಯ ಕುಸಿತ

May 11, 2026
ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

May 11, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL