ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶ್ರೀನಗರ: ಪುಲ್ವಾಮಾ ಜಿಲ್ಲೆಯ ಗುಸ್ಸೋ ಗ್ರಾಮದ ಬಳಿಯಲ್ಲಿ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಇಂದು ಮುಂಜಾನೆ ಯೋಧರು ಹಾಗೂ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಒಬ್ಬ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತಾಗಿ ಖಚಿತ ಮಾಹಿತಿ ಆಧರಿಸಿ ಸಿಆರ್’ಪಿಎಫ್ ಯೋಧರು, 53 ಆರ್’ಆರ್ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಗುಂಡು ಹಾರಿಸಿದ್ದು, ಪ್ರತಿಯಾಗಿ ಸೇನೆಯೂ ಸಹ ಉತ್ತರ ನೀಡಿದೆ.
ಸದ್ಯ ಕಾರ್ಯಾಚರಣೆ ಮುಂದುವರೆದಿದೆ.
Get In Touch With Us info@kalpa.news Whatsapp: 9481252093
Discussion about this post