ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮತ್ತು ಶಾಸಕರಾಗಿದ್ದ ಬಿ.ಎನ್. ವಿಜಯಕುಮಾರ್ ಅವರ ನಿಧನದಿಂದ ರದ್ದಾಗಿದ್ದ ಜಯನಗರ ವಿಧಾನಸಭೆ ಕ್ಷೇತ್ರಕ್ಕೆ ಇಂದು ಚುನಾವಣೆ ನಡೆಯುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಜೂನ್ 16ರಂದು ಜಯನಗರ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
ನಟ ಮುಖ್ಯಮಂತ್ರಿ ಚಂದ್ರು ಹಾಗೂ ಅವರ ಪತ್ನಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಲು ಆಗಮಿಸಿದ್ದರು.
ಸಾಹಿತಿ ಬರಗೂರು ರಾಮಚಂದ್ರಪ್ಪ ಸಹ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾವಣೆ ಮಾಡಿದರು.
ಇನ್ನು, ಜೆಪಿ ನಗರದ ಕ್ಲಾರೆನ್‌ಸ್ ಶಾಲೆಯ ಬೂತ್‌ನಲ್ಲಿ ಮತಯಂತ್ರ ದೋಷದ ಹಿನ್ನೆಲೆಯಲ್ಲಿ ಮತದಾನ ವಿಳಂಬವಾಗಿತ್ತು.
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕಾಂಗ್ರೆಸಿನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌವ್ಯಾ ರೆಡ್ಡಿ ಕಣದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಬಿ.ಎನ್. ವಿಜಯಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ ಸ್ಪರ್ಧೆಯಲ್ಲಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿಯೂ ಇಲ್ಲಿ ಸ್ಪರ್ಧಿಸಿದ್ದಾರೆ. ಜೆಡಿಎಸ್ ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತಾದರೂ, ವಿಧಾನಸಭೆ ಚುನಾವಣೆ ನಡೆದು ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಬೆಂಬಲಿಸುತ್ತಿದೆ.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು, ಜಯನಗರ ಕ್ಷೇತ್ರದ ನಿವಾಸಿಗಳಾದ ಕನ್ನಡ ಚಿತ್ರರಂಗದ ಅನೇಕರು ಬೆಳ್ಳಗೆಯಿಂದಲೇ ಮತದಾನ ಮಾಡುತ್ತಿದ್ದಾರೆ. ಜಯನಗರದ ಸುದರ್ಶನ ವಿದ್ಯಾಮಂದಿರದಲ್ಲಿ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತದಾನ ಮಾಡಿದ್ದಾರೆ. ಸಾಲಿನಲ್ಲಿ ಜನರ ಜೊತೆಗೆ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತ ಚಲಾಯಿಸಲು ಮತದಾನ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಸಾಮಾನ್ಯರಂತೆ ಕ್ಯೂ ನಲ್ಲಿ ನಿಂತು ಮತ ಚಲಾವಣೆ ಮಾಡಿದರು.
ಹಿರಿಯ ನಟಿ ತಾರಾ ತಮ್ಮ ನಿವಾಸದ ಬಳಿಯಿರುವ ಬೂತ್‌ನಲ್ಲಿ ಮತ ಚಲಾವಣೆ ಮಾಡಿದರು.
Discussion about this post