ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೆ.ಆರ್. ಪೇಟೆ: ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸೇರಿದಂತೆ ಹಲವು ವರ್ಷಗಳಿಂದ ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಹೊಸ ಅಧ್ಯಾಯ ಆರಂಭಿಸಿದೆ.
ಅತ್ಯಂತ ಪ್ರಮುಖವಾಗಿ, ಬಿಜೆಪಿಯ ಈ ಗೆಲುವಿನೊಂದಿಗೆ ಕೆ.ಆರ್. ಪೇಟೆ ಉಪಚುನಾವಣೆಯ ಉಸ್ತುವಾರಿ ಹೊತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರ ಸಂಘಟನಾ ಚಾತುರ್ಯ ಇಡಿಯ ರಾಜ್ಯಕ್ಕೇ ಪ್ರದರ್ಶನವಾಗಿದೆ.
ತಮಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಿರುವ ವಿಜಯೇಂದ್ರ ಅವರು, ತಮ್ಮ ಸಂಘಟನಾ ಚಾತುರ್ಯ ಹಾಗೂ ತಮ್ಮ ಪ್ರಭಾವ ಎಂತಹುದ್ದು ಎಂಬುದನ್ನು ರಾಜ್ಯಕ್ಕೆ ಮಾತ್ರವಲ್ಲ ಪಕ್ಷದ ವರಿಷ್ಠರಿಗೆ ಮುಟ್ಟಿಸುವಲ್ಲಿಯೂ ಸಹ ಯಶಸ್ವಿಯಾಗಿದ್ದಾರೆ.
ಕೆ.ಆರ್. ಪೇಟೆಯಲ್ಲಿನ ಯಶಸ್ಸಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರ ಅವರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

Get in Touch With Us info@kalpa.news Whatsapp: 9481252093








Discussion about this post