ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಶಾರದಾ ಅಪ್ಪಾಜಿ ಅವರು ನಾಮಪತ್ರ ಸಲ್ಲಿಸಿದರು.
ಮುಂಜಾನೆ ಗೋಣಿಬೀಡಿನಲ್ಲಿರುವ ಮಾಜಿ ಶಾಸಕ, ಪತಿ ಎಂ.ಜೆ ಅಪ್ಪಾಜಿಯವರ ಶಕ್ತಿಧಾಮಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ನಗರದ ಅಂಡಬ್ರಿಡ್ಜ್’ನಲ್ಲಿ ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿದರು. ವಿವಿಧೆಡೆ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಆನಂತರ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಧರ್ಮಕುಮಾರ್, ಅಲ್ಪಸಂಖ್ಯಾತರ ಮುಖಂಡ ಮುರ್ತುಜಾಖಾನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















