ಕಲ್ಪ ಮೀಡಿಯಾ ಹೌಸ್ | ರಾಂಚಿ |
ಜಾರ್ಖಂಡ್ ಮುಕ್ತಿ ಮೋರ್ಚಾ ಸ್ಥಾಪಕರಲ್ಲಿ ಒಬ್ಬರಾದ, ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್(81) ನಿಧನರಾಗಿದ್ದಾರೆ.
ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್’ನಲ್ಲಿ ಇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಶಿಬು ಸೊರೇನ್ ಪುತ್ರ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಪ್ರೀತಿಯ ದಿಶೋಮ್ ಗುರೂಜಿ ನಮ್ಮನ್ನ ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆ ಎಂದು ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post