ಕಲ್ಪ ಮೀಡಿಯಾ ಹೌಸ್ | ರಾಂಚಿ |
(Jharkhand) ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಶಾ ಸಿಂಗ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜಮ್ಶೆಡ್‌ಪುರದ ಮೆರೈನ್ ಡ್ರೈವ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮೃತರನ್ನು ತ್ರಿಶಾ ಸಿಂಗ್, ಸಾರ್ಥಕ್ ಅಗರ್ವಾಲ್, ನಮನ್ ಗುಪ್ತಾ ಮತ್ತು ವಂಶಿಕಾ ಖಂಡೇಲ್‌ವಾಲ್ ಎಂದು ಗುರುತಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಕಾರಿನಲ್ಲಿದ್ದ ನಾಲ್ವರನ್ನು ಹೊರತೆಗೆದು ಸ್ಥಳೀಯ ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ದುರಾದೃಷ್ಟವಶಾತ್ ನಾಲ್ವರೂ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
Also read>> ಅ.29-ನ.11 : ಹಾಸನಾಂಬಾ ಜಾತ್ರೆ | ಬರದ ನಡುವೆಯೂ ಸಂಭ್ರಮದ ಆಚರಣೆ | ಡಿಸಿ ಹೇಳಿದ್ದೇನು?
Jharkhand: ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಂತಾಪ
ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಗುವನ್ನು ಕಳೆದುಕೊಂಡ ತಾಯಿಯ ನೋವು ಪದಗಳಿಗೆ ಮೀರಿದ್ದು, ಈ ಸಂಕಷ್ಟದ ಸಮಯದಲ್ಲಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಹಾಗೂ ಅವರ ಕುಟುಂಬದೊಂದಿಗೆ ಇರುವುದಾಗಿ ತಿಳಿಸಿದ್ದಾರೆ.
ಸಚಿವ ಇರ್ಫಾನ್ ಅನ್ಸಾರಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









