ನವದೆಹಲಿ: ವಿಧಾನಸಭೆ ವಿಸರ್ಜನೆಗೊಂಡಿರುವ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ 2019ರ ಮೇ ತಿಂಗಳಿಗೂ ಮುನ್ನವೇ ಚುನಾವಣೆ ನಡೆಸಲು ಚಿಂತಿಸಲಾಗುತ್ತಿದೆ ಎಂದು ಮುಖ್ಯಚುನಾವಣಾ ಆಯುಕ್ತ ಒ.ಪಿ. ರಾವತ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, 2019ರ ಮೇ ತಿಂಗಳ ಒಳಗೆ ಅಂದರೆ ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯದ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದಿರುವ ಅವರು, ಈ ಕುರಿತಂತೆ ವಿಧಾನಸಭೆ ವಿಸರ್ಜನೆಗೊಂಡು ಆರು ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನೂ ಸಹ ಪಾಲನೆ ಮಾಡುವುದಾಗಿ ತಿಳಿಸಿದ್ದಾರೆ.
ಇನ್ನು, ರಾಜ್ಯದ ಪರಿಸ್ಥಿತಿ ಸೇರಿದಂತೆ ಎಲ್ಲ ಪರಿಸ್ಥಿತಿಗಳನ್ನು ಅವಲೋಕನ ಮಾಡಿ ಆನಂತರ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
Discussion about this post