No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

kalpa News by kalpa News
June 10, 2019
in ಬೆಂಗಳೂರು ನಗರ
0
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ
Share on FacebookShare on TwitterShare on WhatsApp

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತಿ ಗಿರೀಶ್ ಕಾರ್ನಾಡ್(81) ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಅವರು ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ ಕಾರ್ನಾಡರ ತಂದೆ ಡಾ. ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊಂಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ 5 ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು.

ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ಹೊರ್ಡ್ಸ್‌ ಸ್ಕಾಲರ್’ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್ ಡಿಬೇಟ ಕ್ಲಬ್’ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದರು.

ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು.

ಇವರು ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು.

ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್‌’ಫರ್ಡ್ ಯೂನಿವರ್ಸಿಟಿ ಪ್ರೆಸ್’ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.

ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‌ನ ನಿರ್ದೇಶಕರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬೈಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳು-ಅಂಜುಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ.

ಕಾರ್ನಾಡರ ನಾಟಕಗಳು
1. ಮಾ ನಿಷಾಧ – ಏಕಾಂಕ ನಾಟಕ
2. ಯಯಾತಿ – 1961
3. ತುಘಲಕ್ – 1964
4. ಹಯವದನ – 1972
5. ಅಂಜುಮಲ್ಲಿಗೆ – 1977
6. ಹಿಟ್ಟಿನ ಹುಂಜ ಅಥವಾ ಬಲಿ – 1980
7. ನಾಗಮಂಡಲ – 1990
8. ತಲೆದಂಡ – 1990
9. ಅಗ್ನಿ ಮತ್ತು ಮಳೆ – 1995
10. ಟಿಪ್ಪುವಿನ ಕನಸುಗಳು – 1997
11. ಒಡಕಲು ಬಿಂಬ – 2005
12. ಮದುವೆ ಅಲ್ಬಮ್
13. ಫ್ಲಾವರ್ಸ – 2012
14. ಬೆಂದ ಕಾಳು ಆನ್ ಟೋಸ್ಟ್‌- 2012

ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್ ಗಾಗಿ ಭಾರತದ ಸ್ವಾತಂತ್ರೋತ್ಸವದ 50 ವರ್ಷದ ನೆನಪಿನ ಕಾರ್ಯಕ್ರಮಕ್ಕಾಗಿ ಬರೆದುಕೊಟ್ಟ ನಾಟಕ-ಟಿಪ್ಪುವಿನ ಕನಸುಗಳು.

ಯು.ಆರ್.ಅನಂತಮೂರ್ತಿಯವರ ಕಾದಂಬರಿಯನ್ನು ಆಧರಿಸಿದ ಸಂಸ್ಕಾರ ಚಲನಚಿತ್ರದಲ್ಲಿ ಗಿರೀಶ್ ಕಾರ್ನಾಡರದು ಪ್ರಮುಖ ಪಾತ್ರ ಪ್ರಾಣೇಶಾಚಾರ್ಯರದು. ಪಿ. ಲಂಕೇಶ್ ಅವರದು ವಿರುದ್ಧ ವ್ಯಕ್ತಿತ್ವದ ಪಾತ್ರ. ಈ ಚಿತ್ರದ ನಿರ್ದೇಶಕರು ಪಟ್ಟಾಭಿರಾಮ ರೆಡ್ಡಿ ಅವರು. ಇದು ಕನ್ನಡಕ್ಕೆ ಪ್ರಥಮ ಸ್ವರ್ಣಕಮಲವನ್ನು ತಂದು ಕೊಟ್ಟ ಚಿತ್ರ.

ಆ ನಂತರ ಎಸ್.ಎಲ್. ಭೈರಪ್ಪನವರ ವಂಶವೃಕ್ಷ ಕಾದಂಬರಿಯನ್ನು ಆಧರಿಸಿ, ಬಿ.ವಿ. ಕಾರಂತರ ಜೊತೆಗೂಡಿ ವಂಶವೃಕ್ಷ ಚಿತ್ರವನ್ನು ನಿರ್ದೇಶನ ಮಾಡಿದರು. ಇದು ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪುರಸ್ಕಾರ ಪಡೆಯಿತು.

ಮುಂದೆ ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ ಚಿತ್ರಗಳನ್ನು ನಿರ್ದೇಶಿಸಿದರು.ಕಾಡು ಹಲವಾರು ಪ್ರಶಸ್ತಿ ಪುರಸ್ಕಾರ ಪಡೆಯಿತು.

ನಂತರ ಉತ್ಸವ, ಗೋಧೂಳಿಎಂಬ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದರು. ಬಳಿಕ ರಾಷ್ಟ್ರಕವಿ ಕುವೆಂಪು ಅವರ ಕಾನೂರು ಸುಬ್ಬಮ್ಮ ಹೆಗ್ಗಡತಿ ಕಾದಂಬರಿಯನ್ನು ಆಧರಿಸಿ ಕಾನೂರು ಹೆಗ್ಗಡಿತಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ರಾಜ್ಯ ಪ್ರಶಸ್ತಿ, ರಾಷ್ಟ್ರೀಯ ಪುರಸ್ಕಾರ ಪಡೆದು, ಪನೋರಮಕ್ಕೂ ಆಯ್ಕೆಯಾಯಿತು. ಇದಲ್ಲದೆ ಕನಕ ಪುರಂದರ, ದ.ರಾ. ಬೇಂದ್ರೆ ಹಾಗೂ ಸೂಫಿ ಪಂಥ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದರು. ಪರಿಸರ ವಿನಾಶ ಕುರಿತು ಚೆಲುವಿ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದರು. 2007 ರಲ್ಲಿ ತೆರೆಕಂಡ ಆ ದಿನಗಳು ಚಿತ್ರಕ್ಕೆ ಅಗ್ನಿ ಶ್ರೀಧರ್ ಅವರ ಜೊತೆಗೂಡಿ ಚಿತ್ರಕಥೆಯನ್ನು ಬರೆದಿದ್ದಾರೆ. ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಕಾರ್ನಾಡರು ವಸ್ತುವನ್ನು ಗ್ರಹಿಸುವ ಕ್ರಮದಲ್ಲೇ ಅವರ ಅನನ್ಯತೆ ಇದೆ. ಈ ಗ್ರಹಿಕೆಗೆ ಪೂರಕವಾದ ರಚನಾಕ್ರಮವನ್ನು ಅವರು ಕಂಡುಕೊಂಡಿದ್ದಾರೆ.

ಪ್ರಶಸ್ತಿಗಳು:

  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
  • ಗುಬ್ಬಿ ವೀರಣ್ಣ ಪ್ರಶಸ್ತಿ
  • ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ
  • ಪದ್ಮಶ್ರೀ -1974
  • ಪದ್ಮಭೂಷಣ -1992
  • ಜ್ಞಾನಪೀಠ -1998
  • ಕಾಳಿದಾಸ ಸಮ್ಮಾನ್ – 1998
Tags: DeathDramaGirish KarnadKannada Newsಗಿರೀಶ್ ಕಾರ್ನಾಡ್ಜ್ಞಾನಪೀಠ ಪ್ರಶಸ್ತಿನಿಧನವಿಧಿವಶಸಾವು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿ ಮಿಸ್ ಯೂ ಸುಷ್ಮಾ ತಾಯಿ

Next Post

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

kalpa News

kalpa News

Next Post
ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL