ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ VTU ನಡೆಸಿದ 2020-23 ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ JNNCE ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.
ಇದೇ ವೇಳೆ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ.ಕೆ. ವಂತಕರ್ ರಾಜ್ಯಕ್ಕೆ ಒಂಬತ್ತನೆ ರ‍್ಯಾಂಕ್ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
Also read: ಕುವೆಂಪು ವಿವಿ ನೂತನ ಕುಲಸಚಿವರಾಗಿ ಪ್ರೊ.ಪಿ. ಕಣ್ಣನ್ ಅಧಿಕಾರ ಸ್ವೀಕಾರ
ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಈ ಇಬ್ಬರು ವಿದ್ಯಾರ್ಥಿನಿಯರನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















