ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರ ಧರ್ಮಸ್ಥಳ #Dharmasthala ಹಾಗೂ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ರೀತಿಯಲ್ಲಿ ಅಪಪ್ರಚಾರ ಮಾಡದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಜಾನ್ ಡೋ(ಅಶೋಕ್ ಕುಮಾರ್) ಆದೇಶವನ್ನು ನೀಡಿದೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ #SocialMedia ನಡೆಸಲಾಗುತ್ತಿರುವ ಅವಹೇಳನದ ವಿಚಾರದಲ್ಲಿ ಗರಂ ಆಗಿರುವ ನ್ಯಾಯಾಲಯ, ಈವರೆಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಎಲ್ಲಾ ವಿಡಿಯೋಗಳನ್ನು ಡಿಲೀಟ್ ಮಾಡುವಂತೆಯೂ ಸೂಚನೆ ನೀಡಿದೆ.
Also Read>> ಹಿಂಡ್ಲೆಮನೆ: ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !
ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂಬ ಯೂಟ್ಯೂಬರ್ ಮಾಡಿದ್ದ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಇದನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವೀರೇಂದ್ರ ಹೆಗ್ಗಡೆ ಹಾಗೂ ಧರ್ಮಸ್ಥಳ ಕ್ಷೇತ್ರದ ಕುರಿತಾಗಿ ಅವಹೇಳನಕಾರಿ ವೀಡಿಯೋಗಳು ಹಾಗೂ ಕಂಟೆಂಟ್’ಗಳು ಹರಿದಾಡಿದವರು. ಈ ಹಿನ್ನೆಲೆಯಲ್ಲಿ ಸುಖೇಸ್ ಹಾಗೂ ಸೀನಪ್ಪ ಎನ್ನುವವರು ಸೇರಿದಂತೆ ನಾಲ್ವರು ದಾವೆ ಹೂಡಿದ್ದರು.
ಪ್ರಕರಣ ಕುರಿತಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ಹಿರಿಯ ವಕೀಲ ರಾಜಶೇಖರ್ ಹಿಲಿಯಾರು, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಯೂಟ್ಯೂಬ್, ಫೇಸ್ ಬುಕ್, ಇನ್ಸಾö್ಟಗ್ರಾಂ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಮತ್ತು ಅಜಾಗರೂಕ ಆರೋಪಗಳನ್ನು ಹೊತ್ತ ಸುದ್ದಿಗಳನ್ನು ಮತ್ತು ವಿಡಿಯೊಗಳನ್ನು ರಚಿಸಿ ಬಿತ್ತರಿಸಲಾಗುತ್ತಿದೆ. ಈ ತರಹದ ವಿಡಿಯೋ ಮಾಡುವುದು, ಅಪ್ಲೋಡ್ ಮಾಡುವುದು, ಮತ್ತೊಬ್ಬರಿಗೆ ಕಳಿಸುವುದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುದಕ್ಕೆ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದಿದ್ದರು.
ಏನಿದು ಜಾನ್ ಡೋ ಕಾನೂನು?
ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ, ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.
Contempt of Court ಆಗುತ್ತದೆ ಎಚ್ಚರ!
ನ್ಯಾಯಾಲಯ ನೀಡಿರುವ ಜಾನ್ ಡೋ ಆದೇಶದ ಪ್ರಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಅವಹೇಳನಕಾರಿ ಅಪಪ್ರಚಾರವನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧವಾಗಿರುತ್ತದೆ.
ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂದಿದ್ದಲ್ಲಿ ತಕ್ಷಣ ಅಳಿಸಿಹಾಕುವುದು ಮತ್ತು ಮುಂದುವರಿಸಿದ್ದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post