No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ನಿರ್ಮಾಣ ಸಂಸ್ಥೆಗಳಿಗೆ ಸಿಎಂ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 13, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದ ಧ್ಯೇಯವನ್ನು ಸಾಕಾರಗೊಳಿಸಲು ನಿರ್ಮಾಣ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #BasavarajaBommai ತಿಳಿಸಿದರು.

Also Read: ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

ಅವರು ಇಂದು ಬೆಂಗಳೂರಿನಲ್ಲಿ #Bengaluru ಆಯೋಜಿಸಲಾಗಿರುವ ಟನ್ನಲಿಂಗ್ ಮತ್ತು ಅಂಡರಗ್ರೌಂಡಿಂಗ್ ಕನ್ಸಟ್ರಕ್ಷನ್ ಕುರಿತಾದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ‘ ನಿರ್ಮಾಣ’ 2022 ಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ನಿರ್ಮಾಣ ಕಾರ್ಯಗಳಲ್ಲಿ ನಿರ್ಮಾಣ ಸಂಸ್ಥೆಗಳು ತಮ್ಮ ವೃತ್ತಿಪರತೆ, ನಿರ್ವಹಣಾ ಕೌಶಲ್ಯಗಳೊಂದಿಗೆ ಸರ್ಕಾರದೊಂದಿಗೆ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಭಾರತದ ಪ್ರಧಾನಮಂತ್ರಿಗಳ ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ ಆಶಯವನ್ನು ಸಾಕಾರಗೊಳಿಸಲು ಸರ್ಕಾರ ಮತ್ತು ಸಂಸ್ಥೆಗಳು ಉತ್ತಮ ದೇಶವನ್ನು ಕಟ್ಟುವ ಕಾಯಕದಲ್ಲಿ ಒಟ್ಟಾಗಿ ಶ್ರಮಿಸಬೇಕು. ಗುಡ್ಡಪ್ರದೇಶಗಳು, ಭೂಗತ ಪ್ರದೇಶಗಳು ಹಾಗೂ ನಗರ ಪ್ರದೇಶಗಳಲ್ಲಿ ಅಂಡರ್‍ಗ್ರೌಂಡ್ ಕಾಮಗಾರಿಗಳಲ್ಲಿನ ಪರಿಣಿತಿಯೊಂದಿಗೆ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

Also Read: ಜೂನ್ 10ರಂದು ರಾಜ್ಯದ 4 ಸ್ಥಾನಗಳಿಗೆ ರಾಜ್ಯಸಭೆ ಚುನಾವಣೆ ಘೋಷಣೆ

ಕರ್ನಾಟಕ ಆಧುನಿಕ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ
ಸಾರ್ವಜನಿಕರ ಸುಲಲಿತ ಓಡಾಟಕ್ಕೆ ದಾರಿ ಮಾಡಿಕೊಡುವುದು ಸಾರ್ಥಕವಾದ ಕಾರ್ಯ. ಕರ್ನಾಟಕ ಆಧುನಿಕ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಡ್ಯಾಂ, ಸುರಂಗ, ವಿದ್ಯುತ್ ಯೋಜನೆಗಳನ್ನು ಈಗಾಗಲೇ ನಿರ್ಮಿಸಿ ನಮ್ಮ ಹಿರಿಯರು ಉತ್ತಮ ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ರಾಜ್ಯದಲ್ಲಿ 1970ರಿಂದಲೂ ಬಹಳಷ್ಟು ಸುರಂಗಗಳನ್ನು ನಿರ್ಮಿಸಲಾಗಿದೆ. ಜಲವಿದ್ಯುತ್ ಯೋಜನೆಗಳಲ್ಲಿ ಪೆನ್ಸ್ಟಾಕ್‍ಗಳ ಸ್ಥಾಪನೆಗೆ ಸುರಂಗಗಳನ್ನು ಕೊರೆಯಲಾಗಿದೆ. ಮೆಟ್ರೋ ಕಾಮಗಾರಿಗಳಿಗೆ ಟನಲಿಂಗ್ ನಿಂದ ಸುರಂಗಮಾರ್ಗಗಳನ್ನು ನಿರ್ಮಿಸಲಾಗಿದೆ ಎಂದರು.
ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು
ನಗರ ಪ್ರದೇಶಗಳಲ್ಲಿ ಸುರಂಗಮಾರ್ಗ ನಿರ್ಮಿಸುವುದು ಸವಾಲಿನ ಕೆಲಸ. ಇಂತಹ ಸವಾಲುಗಳನ್ನು ತಂತ್ರಜ್ಞಾನದ ಅಭಿವೃದ್ಧಿಗೆ ಪೂರಕವಾಗಿದೆ. ಇಂತಹ ಕ್ಲಿಷ್ಟಕರ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಇಂಜಿನಿಯರ್ ಹಾಗೂ ಅಂಡರ್‍ಗ್ರೌಂಡ್ ನಿರ್ಮಾಣ ಕಂಪನಿಗಳಿಗೆ ಅಭಿನಂದನೆಗಳು. ಇಲ್ಲಿನ ಕಾರ್ಮಿಕರ ಕೊಡುಗೆ ಅತಿ ಹೆಚ್ಚಿನದು. ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಅಂಡರ್‍ಗ್ರೌಂಡ್ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕರು ನಿಜವಾದ ದೇಶದ ಆಸ್ತಿಯಾಗಿದ್ದು, ಇವರ ಹಿತರಕ್ಷಣೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದರು.
ಸವಾಲುಗಳಿಗೆ ತಕ್ಕಂತೆ ತಂತ್ರಜ್ಞಾನವೂ ಆಧುನೀಕರಣಗೊಂಡಿದೆ
ಸುರಂಗ ಮಾರ್ಗವೂ ಸೇರಿದಂತೆ ಅಂಡರ್‍ಗ್ರೌಂಡ್ ನಿರ್ಮಾಣಗಳು ಪ್ರಪಂಚಕ್ಕೆ ಹೊಸದಲ್ಲ. ಆದರೆ ಈ ನಿರ್ಮಾಣಗಳಲ್ಲಿ ಎದುರಾಗುವ ಸವಾಲುಗಳಿಗೆ ತಕ್ಕಂತೆ ತಂತ್ರಜ್ಞಾನವೂ ಆಧುನೀಕರಣಗೊಂಡಿದೆ. ಸುರಂಗಗಳು ರೈಲು ರಸ್ತೆ ಸಾರಿಗೆಯಾಗಿ ಬಳಕೆಯಾಗುತ್ತಿತ್ತು. ಈಗ ಪೈಪ್‍ಲೈನ್‍ಗಳಲ್ಲಿ ಅನಿಲ, ನೀರಿನ ಸರಬರಾಜುಗಳಿಗೂ ಸುರಂಗಗಳನ್ನು ಬಳಸಲಾಗುತ್ತಿದೆ. ತನ್ನ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಸಾಹಸಿಯಾದ ಮನುಷ್ಯ ಈ ಸುರಂಗ ಮಾರ್ಗಗಳ ನಿರ್ಮಾಣದಲ್ಲಿ ಬೆಟ್ಟಗಳು, ಆಳವಾದ ಸಮುದ್ರ ಹೀಗೆ ಎದುರಾಗುವ ಎಲ್ಲ ತೊಡಕುಗಳನ್ನು ತೊಡೆಯಬಲ್ಲವನಾಗಿದ್ದಾನೆ. ಹ್ಯಾಂಡ್‍ಮೇಡ್ ಸಣ್ಣ ಸುರಂಗಗಳಿಂದ ಹಿಡಿದು ದೊಡ್ಡ ಸುರಂಗಮಾರ್ಗಗಳ ನಿರ್ಮಾಣದವರೆಗೆ ತಂತ್ರಜ್ಞಾನದ ಬೆಳವಣಿಗೆಯಾಗಿದೆ. ಸುರಂಗ ಮಾರ್ಗಗಳ ನಿರ್ಮಾಣ ಕಾರ್ಯದಲ್ಲಿ ಎದುರಾಗುವ ಭೌಗೋಳಿಕ ಸವಾಲುಗಳು ಹಾಗೂ ತ್ಯಾಜ್ಯದ ನಿರ್ವಹಣೆಗೆ ವೈಜ್ಞಾನಿಕ ವ್ಯವಸ್ಥೆ ಅಗತ್ಯವಾಗಿದೆ ಎಂದರು.

Also Read: ಎಜಿ ಅಂಡ್ ಪಿ ಪ್ರಥಮ್ ಸಂಸ್ಥೆಯಿಂದ ಎಲ್‌ಸಿಎನ್‌ಜಿ ಘಟಕ ಸ್ಥಾಪನೆ

ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿಯು 2000 ತರಬೇತಿ ಶಿಬಿರಗಳನ್ನು ದೇಶಾದ್ಯಂತ ನಡೆಸಿರುವುದು ಶ್ಲಾಘನೀಯ. ನಿರ್ಮಾಣ ಕ್ಷೇತ್ರದ ಅಭಿವೃದ್ಧಿಗೆ ಟನಲಿಂಗ್ ಮತ್ತು ಅಂಡರ್‍ಗ್ರೌಂಡಿಂಗ್ ಕನ್ಸಟ್ರಕ್ಷನ್ ಕುರಿತ ಸಮಾವೇಶ ಸಹಕಾರಿಯಾಗಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: aatma nirbhar bharat abhiyanCM Basavaraja BommaiHydroelectric projectKannada News WebsiteKarnatakaLatest News KannadaMake in Indiasubwayಆತ್ಮನಿರ್ಭರ್ ಭಾರತಕರ್ನಾಟಕಕಾರ್ಮಿಕಜಲವಿದ್ಯುತ್ ಯೋಜನೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮೇಕ್ ಇನ್ ಇಂಡಿಯಾಸುರಂಗ ಮಾರ್ಗ
Share220Tweet123Send
Previous Post

ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

Next Post

ಸಿಂಹಧಾಮದಲ್ಲಿ ಹುಲಿ ಸಾವು: ಎಷ್ಟಕ್ಕಿಳಿಯಿತು ಸಫಾರಿಯಲ್ಲಿ ವ್ಯಾಘ್ರಗಳ ಸಂಖ್ಯೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಂಹಧಾಮದಲ್ಲಿ ಹುಲಿ ಸಾವು: ಎಷ್ಟಕ್ಕಿಳಿಯಿತು ಸಫಾರಿಯಲ್ಲಿ ವ್ಯಾಘ್ರಗಳ ಸಂಖ್ಯೆ?

ಸಿಂಹಧಾಮದಲ್ಲಿ ಹುಲಿ ಸಾವು: ಎಷ್ಟಕ್ಕಿಳಿಯಿತು ಸಫಾರಿಯಲ್ಲಿ ವ್ಯಾಘ್ರಗಳ ಸಂಖ್ಯೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL