ಮಡಿಕೇರಿ: ಟಿಪ್ಪು ಜಯಂತಿ ವಿರೋಧಿಸಿ ಭಾಷಣ ಮಾಡಿದ್ದಕ್ಕೆ ಧರ್ಮ ನಿಂದನೆ ಮಾಡಿದ್ದೇರೆ ಎಂದು ಆರೋಪಿಸಿ, ಯುವ ಪತ್ರಕರ್ತ ಹಾಗೂ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊನ್ನಂಪೇಟೆ ಪೊಲೀಸರು ತಮ್ಮಯ್ಯ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಿಪ್ಪು ಜಯಂತಿ ವಿರೋಧಿಸಿ ನ.5ರಂದು ಗೋಣಿಕೊಪ್ಪದ ಪ್ರಜ್ಞಾ ಕಾವೇರಿ ಸಂಘಟನೆ ಆಯೋಜಿಸಿದ್ದ ಟಿಪ್ಪು ಕರಾಳ ಮುಖಗಳ ಅನಾವರಣ ಎಂಬ ವಿಚಾರ ಸಂಕಿರಣದಲ್ಲಿ ಸಂತೋಷ್ ತಮ್ಮಯ್ಯ ಮಾತನಾಡಿದ್ದರು. ಅವರ ಭಾಷಣ ಧರ್ಮ ನಿಂದನೆಯಾಗಿದೆ ಎಂದು ದೂರು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ಇನ್ನು, ಸಂತೋಷ್ ತಮ್ಮಯ್ಯ ಬಂಧನವನ್ನು ಖಂಡಿಸಿ, ಹಿಂದೂ ಪರ ಸಂಘಟನೆಗಳು ಇಂದು ಗೋಣಿಕೊಪ್ಪದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
Silent Skin Damage in Winter: Children at Higher Risk Than Adults, Doctors Warn
Kalpa Media House | Bengaluru, Whitefield | Although winter is considered a comfortable season, doctors warn that cold weather can...
Read moreDetails















