ಕಲ್ಪ ಮೀಡಿಯಾ ಹೌಸ್
ಪಾಂಡಿಚೆರಿ: ರಾಜ್ಯದ ರಾಜಭವನ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಹೊಳಲೂರು ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಈ. ಕಾಂತೇಶ್ ಪಾಲ್ಗೊಂಡರು.
ರಾಜಭವನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಬ್ಬರದ ಪ್ರಚಾರ ನಡೆಸಿದೆ. ಇದರಲ್ಲಿ ಪಾಲ್ಗೊಂಡ ಕಾಂತೇಶ್ ಅವರು, ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿ, ಬಿಜೆಪಿಯನ್ನು ಬೆಂಬಲಿಸುವಂತೆ ಕೋರಿದರು.
ಕರ್ನಾಟಕ ರಾಜ್ಯದ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ತುಳಸಿ ಮುನಿರಾಜ ಅವರು ಪ್ರಚಾರದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post