ಕಲ್ಪ ಮೀಡಿಯಾ ಹೌಸ್ | ಕಾಬೂಲ್ |
ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಸಂಭವಿಸಿದ ಭಾರಿ ಭೂಕಂಪನದಲ್ಲಿ ಕನಿಷ್ಠ 250 ಮಂದಿ ಮೃತಪಟ್ಟು 500ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ಮುಖ್ಯಸ್ಥ ಮೊಹಮ್ಮದ್ ನಸೀಮ್ ಹಕ್ಕಾನಿ ತಿಳಿಸಿದ್ದಾರೆ.ಸಾ

ವಿನ ಸಂಖ್ಯೆ 250ಕ್ಕೂ ಹೆಚ್ಚಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















